ಮಡಿಕೇರಿ, ಫೆ. 21: ಅಂತರ ರಾಷ್ಟ್ರೀಯ ಮಾತೃಭಾಷಾ ದಿನಾಚರಣೆ ಅಂಗವಾಗಿ ಸಿ.ಎನ್.ಸಿ ಆಶ್ರಯದಲ್ಲಿ ಇಂದು ಕೊಡಗು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸತ್ಯಾಗ್ರಹ ನಡೆಯಿತು.
ಕೊಡವ ತಕ್ಕನ್ನು ಸಂವಿಧಾನದ 8ನೇ ಶೆಡ್ಯೂಲ್ಗೆ ಸೇರಿಸಬೇಕು ಮತ್ತು ವಿಶ್ವ ಸಂಸ್ಥೆಯ ಅಧಿಕೃತ ಭಾಷೆಗಳಲ್ಲೊಂದಾಗಿ ಪರಿಗಣಿಸಬೇಕು ಹಾಗೂ ಪ್ರತೀ ವರ್ಷ ಆಕ್ಸ್ಫರ್ಡ್ ಡಿಕ್ಷ್ನರಿಯೂ ಜಗತ್ತಿನ ವಿವಿಧ ಭಾಷೆಗಳ 15 ಸಾವಿರ ಪದಗಳನ್ನು ಆಯ್ಕೆ ಮಾಡಿ ಅಳವಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದು ಈ ಆಕ್ಸ್ಫರ್ಡ್ ಡಿಕ್ಷ್ನರಿಯಲ್ಲಿ ಕೊಡವ ಭಾಷೆಯ ಪದಗಳನ್ನು ಸೇರಿಸುವದರ ಮೂಲಕ ಕೊಡವ ತಕ್ಕ್ ಮತ್ತು ಆಕ್ಸ್ಫರ್ಡ್ ಡಿಕ್ಷ್ನರಿ ಎರಡನ್ನು ಸಮೃದ್ಧ ಮತ್ತು ಶ್ರೀಮಂತಗೊಳ್ಳಬೇಕೆಂಬ ಬೇಡಿಕೆ ಯೊಂದಿಗೆ ಒಟ್ಟು 14 ಹಕ್ಕೊತ್ತಾಯ ಗಳನ್ನ ಮಂಡಿಸಲಾಯಿತು.