ಕೂಡಿಗೆ, ಫೆ. 22: ಜಿಲ್ಲೆಯ ಐತಿಹಾಸಿಕ ಮತ್ತು ಪುರಾತನ ಶನೇಶ್ಚರ ದೇವರ ದೇವಾಲಯ ಕುಶಾಲನಗರ ಸಮೀಪದ ತೊರೆನೂರು ರೇವೇಗೌಡರ ಕೊಪ್ಪಲಿನಲ್ಲಿದ್ದು ಪ್ರತಿ ಮಹಾ ಶಿವರಾತ್ರಿಯಂದು ಉತ್ಸವ ನಡೆಯುತ್ತದೆ.

ಮಹಾ ಶಿವರಾತ್ರಿಯ ಅಂಗವಾಗಿ ಗಾಯಕ ಜನಾರ್ದನ್ ಹಾಗೂ ಬಿ.ಎಸ್. ಲೋಕೇಶ್ ಸಾಗರ್ ಅವರ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದೊಂದಿಗೆ ರಾಜ್ಯಮಟ್ಟದ ಜನಪದೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಉತ್ಸವದ ಅಂಗವಾಗಿ ಅಂದು ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ವಿವಿಧ ಪೂಜಾ ಕಾರ್ಯಗಳು ನಡೆಯಲಿವೆ. ಬೆಳಿಗ್ಗೆ ಮಹಾಗಣಪತಿ ಹೋಮ, ಅಭಿಷೇಕ, ಸತ್ಯನಾರಾಯಣ ಪೂಜೆ, ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ನಡೆಯಲಿದೆ.

ಸಂಜೆ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿದ್ದು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತೊರೆನೂರು ವಿರಕ್ತ ಮಠದ ಮಲ್ಲೇಶ ಸ್ವಾಮಿಗಳು ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಓರಿಯಂಟಲ್ ಇನ್ಸೂರೆನ್ಸ್ ಅಭಿವೃದ್ಧಿ ಅಧಿಕಾರಿ ಸಿ.ಎ. ಮಾದಪ್ಪ, ಆಗಮಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಾಲಯ ಸಮಿತಿ ಅಧ್ಯಕ್ಷ ಸಿ.ಎ. ಚಂಗಪ್ಪ ವಹಿಸಲಿದ್ದಾರೆ. ಹವ್ಯಾಸಿ ರಂಗಭೂಮಿ ಕಲಾವಿದ, ರಂಗಾಯಣದ ಮಾಜಿ ನಿರ್ದೇಶಕ ಹೆಚ್. ಜನಾರ್ದನ್ ಉದ್ಘಾಟನೆ ನೆರವೇರಿಸಲಿದ್ದಾರೆ.

ಸೋಮವಾರಪೇಟೆ ತಾಲೂಕು ಉಪ ಅಧೀಕ್ಷಕ ಸಂಪತ್ ಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್ ಸಾಗರ್, ಕುಶಾಲನಗರ ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಚಂದ್ರಪ್ಪ, ಕಾಫಿ ಬೆಳೆಗಾರ ಜೆಮ್ಸಿ ಪೊನ್ನಪ್ಪ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ವಿ.ಪಿ. ಶಶಿಧರ್, ರಾಜ್ಯ ಐ.ಎನ್.ಟಿ.ಯು.ಸಿ. ಕಾರ್ಮಿಕ ಕಾಂಗ್ರೆಸ್ ಘಟಕದ ಕಾರ್ಯದರ್ಶಿ ನಾಪಂಡ ಮುತ್ತಪ್ಪ, ಕುಶಾಲನಗರ ಪ.ಪಂ. ಮುಖ್ಯಾಧಿಕಾರಿ ಶ್ರೀಧರ್ ಭಾಗವಹಿಸಲಿದ್ದಾರೆ.

ಈ ಸಂದರ್ಭ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಆರ್. ಶ್ರೀನಿವಾಸ್ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಸದಸ್ಯೆ ಕೆ.ಪಿ. ಚಂದ್ರಕಲಾ, ತಾ.ಪಂ. ಸದಸ್ಯ ಎನ್.ಎಸ್. ಜಯಣ್ಣ, ತೊರೆನೂರು ಗ್ರಾ.ಪಂ. ಅಧ್ಯಕ್ಷ ದೇವರಾಜ್, ಹೆಬ್ಬಾಲೆ ಗ್ರಾ.ಪಂ. ಅಧ್ಯಕ್ಷೆ ಲತಾ, ಶಿರಂಗಾಲ ಗ್ರಾ.ಪಂ. ಅಧ್ಯಕ್ಷ ರಮೇಶ್, ತಾ.ಪಂ. ಮಾಜಿ ಉಪಾಧ್ಯಕ್ಷ ಟಿ.ಕೆ. ಪಾಂಡುರಂಗ, ತೊರೆನೂರು ಗ್ರಾ.ಪಂ. ಉಪಾಧ್ಯಕ್ಷೆ ದಾಕ್ಷಾಯಿಣಿ, ತೊರೆನೂರಿನ ಹೆಚ್.ಟಿ. ದಿನೇಶ್, ಟಿ.ಬಿ. ಜಗದೀಶ್, ರೂಪ ದೇವರಾಜ್, ವಿವಿಧ ಸಂಘಟನೆಯ ಮುಖಂಡರು ಪಾಲ್ಗೊಳ್ಳುವರು ಎಂದು ದೇವಾಲಯ ಸಮಿತಿಯ ಕಾರ್ಯದರ್ಶಿ ಕೆ.ಎಸ್. ಕೃಷ್ಣೇಗೌಡ ತಿಳಿಸಿದ್ದಾರೆ.