ಮಡಿಕೇರಿ, ಫೆ. 22: ಶ್ರೀ ಭಗಂಡೇಶ್ವರ - ತಲಕಾವೇರಿ ದೇವಾಲಯಗಳಲ್ಲಿ ತಾ. 24ರಂದು ಮಹಾಶಿವರಾತ್ರಿಯ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬೆಳಿಗ್ಗೆ 6.30 ಗಂಟೆಗೆ ಶತರುದ್ರಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಸಾಯಂಕಾಲ 6 ಗಂಟೆಗೆ ತಾಯಂಬಕ ಸೇವೆ, ಸಾಯಂಕಾಲ 6.30 ಗಂಟೆಯಿಂದ ಏಕಾದಶ ರುದ್ರಾಭಿಷೇಕ, ಮಹಾಮಂಗಳಾರತಿ, ದೇವರ ನೃತ್ಯ ಉತ್ಸವ. ಶ್ರೀ ತಲಕಾವೇರಿ ದೇವಾಲಯದಲ್ಲಿ ಬೆಳಿಗ್ಗೆ 9 ಗಂಟೆಗೆ ಶತರುದ್ರಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಸಾಯಂಕಾಲ 6.30 ಗಂಟೆಯಿಂದ ಏಕಾದಶ ರುದ್ರಾಭಿಷೇಕ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ.

ಶ್ರೀ ಭಗಂಡೇಶ್ವರ ದೇವಾಲಯದ ಆವರಣದಲ್ಲಿ ಸಂಜೆ 6.30 ಗಂಟೆಯಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.

ಭಾಗಮಂಡಲ ಶ್ರೀ ಕಾವೇರಿ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಮಹಾಶಿವರಾತ್ರಿಯ ಅಂಗವಾಗಿ ತಾ. 24ರಂದು ತ್ರಿವೇಣಿ ಸಂಗಮದ ಬಳಿಯ ವೇದಿಕೆಯಲ್ಲಿ ರಾತ್ರಿ 6 ಗಂಟೆಗೆ ಸಮಾರಂಭ ನಡೆಯಲಿದ್ದು, ಸಂಘದ ಅಧ್ಯಕ್ಷ ಅನಿಲ್ ಆಳ್ವ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕೆ.ಜೆ. ದಿವಾಕರ್, ಜಿ.ಪಂ. ಸದಸ್ಯೆ ಕವಿತಾ ಪ್ರಭಾಕರ್, ತಾ.ಪಂ. ಸದಸ್ಯೆ ಎಂ.ಕೆ. ಸಂಧ್ಯಾ ಮತ್ತಿತರರು ಪಾಲ್ಗೊಳ್ಳುವರು. ರಾತ್ರಿ 8 ಗಂಟೆಯ ಬಳಿಕ ಪುತ್ತೂರಿನ ಆಕಾಶ್ ಮೆಲೋಡಿಸ್ ತಂಡದಿಂದ ಸಂಗೀತ ರಸಮಂಜರಿ ನಡೆಯಲಿದೆ.