ಕೂಡಿಗೆ, ಫೆ. 22: ದಿನಸಿ ಅಂಗಡಿ ಮುಂಗಟ್ಟುಗಳಲ್ಲಿ ಕದ್ದು ಮುಚ್ಚಿ ಅಕ್ರವi ಮದ್ಯ ಮಾರಾಟ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ, ಪ್ರಕರಣ ದಾಖಲಾಗಿರುವ ಅಂಗಡಿಗಳ ಪಟ್ಟಿ ನೀಡುತ್ತೇವೆ ಕೂಡಲೇ ಗ್ರಾ.ಪಂ. ಅಧಿಕಾರಿಗಳು ಅಂತಹ ಅಂಗಡಿಗಳ ಪರವಾನಗಿ ರದ್ದುಗೊಳಿಸುವಂತೆ ಸೋಮವಾರಪೇಟೆ ಡಿ.ವೈ.ಎಸ್.ಪಿ. ಸಂಪತ್ ಕುಮಾರ್ ಹೇಳಿದರು.
ಕುಶಾಲನಗರ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಹೋಬಳಿ ವ್ಯಾಪಿಯ ಗ್ರಾಮಸ್ಥರ ಸಲಹೆ ಮತ್ತು ದೂರುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆಗಳಲ್ಲಿ ಹಾಗೂ ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿದೆ ಅವರುಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸುತ್ತಿದ್ದೇವೆ, ಗ್ರಾಮ ಪಂಚಾಯಿತಿ ಸದಸ್ಯರು ಈ ಬಗ್ಗೆ ಹೆಚ್ಚಿನ ಜವಾಬ್ದಾರಿ ವಹಿಸಿ ಕಾನೂನು ಉಲ್ಲಂಘನೆಯಾಗದಂತೆ ಗ್ರಾಮಸ್ಥರಿಗೆ ಅರಿವು ಮೂಡಿಸಬೇಕು ಎಂದರು.
ಕುಶಾಲನಗರ ಹೋಬಳಿ ಸಂಚಾರಿ ಪೆÇಲೀಸ್ ಠಾಣೆ ಇತ್ತೀಚೆಗಷ್ಟೇ ಪ್ರಾರಂಭವಾಗಿದೆ. ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು. ಮದ್ಯ ಸೇವಿಸಿ ವಾಹನ ಚಲಾಯಿಸಬಾರದು. ಸಾರ್ವಜನಿಕರು ಸಂಚಾರ ನಿಯಮ ಪಾಲನೆ ಮಾಡಿ ಪೆÇಲೀಸರೊಂದಿಗೆ ಸಹಕರಿಸಬೇಕು ಎಂದರು.
ವೃತ್ತ ನಿರೀಕ್ಷಕ ಕ್ಯಾತೇಗೌಡ ಮಾತನಾಡಿ, ಗಾಂಜಾ ಪ್ರಕರಣಗಳು ಗುಡ್ಡೆಹೊಸೂರು ಬಳಿಯ ತೆಪ್ಪದಕಂಡಿ ಭಾಗಗಳಲ್ಲಿ ಕಂಡುಬಂದಿವೆ ಎಂದರು. ಗ್ರಾಮಾಂತರ ಪೆÇಲೀಸ್ ಠಾಣಾಧಿಕಾರಿ ಮಹೇಶ್ ಮಾತನಾಡಿ, ಕಾಲೇಜು ಕ್ಯಾಂಪಸ್ ಗಳಲ್ಲಿ ಸಿಗರೇಟ್, ಗಾಂಜಾ ಸೇವನೆ ಬಗ್ಗೆ ದೂರುಗಳು ಬಂದಿವೆ ಈ ಬಗ್ಗೆ ಕಾಲೇಜು ಪದಾಧಿಕಾರಿಗಳ ಸಭೆ ಕರೆದು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವದು ಎಂದರು.
ಸಭೆಯಲ್ಲಿ ನಂಜರಾಯಪಟ್ಟಣ, ಗುಡ್ಡೆಹೊಸೂರು, ಕೂಡಿಗೆ, ಹೆಬ್ಬಾಲೆ ಗ್ರಾ.ಪಂ. ವ್ಯಾಪ್ತಿಯ ಪ್ರಮುಖ ಗ್ರಾಮಸ್ಥರು ಭಾಗವಹಿಸಿದ್ದರು.