ಮಡಿಕೇರಿ, ಫೆ. 22: ವೀರಾಜಪೇಟೆ ಪಟ್ಟಣ ಪಂಚಾಯಿತಿಯ ಬೇತ್ರಿ ಮೂಲಕ ನೀರು ಸರಬರಾಜು ಸ್ಥಾವರದ ಜಾಕ್‍ವೆಲ್‍ನಲ್ಲಿರುವ ಹೂಳನ್ನು ತೆಗೆಯುವ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ ತಾ. 23 ಮತ್ತು 24 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ವಿರಾಜಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಅವರು ಕೋರಿದ್ದಾರೆ.