ಸುಂಟಿಕೊಪ್ಪ, ಫೆ. 22: ಕ್ರೀಡಾ ಕೂಟಗಳಲ್ಲಿ ಭಾಗವಹಿಸುವದರಿಂದ ಮಾನವನ ಆರೋಗ್ಯ ವೃದ್ಧಿಸುವದಲ್ಲದೆ ಮನಸ್ಸಿಗೆ ಶಾಂತಿಯೊಂದಿಗೆ ಕ್ರೀಯಾಶೀಲತೆ ಹೆಚ್ಚಾಗುತ್ತದೆ ಎಂದು ಪ್ರಗತಿಪರ ಕೃಷಿಕ ದಾಸಂಡ ರಮೇಶ್ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಸೋಮವಾರಪೇಟೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಸಹಯೋಗದಲ್ಲಿ ಇಲ್ಲಿನ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ ರಂಗೋಲಿ, ಅಡುಗೆ, ಗ್ರಾಮೀಣ ಕ್ರೀಡಾಕೂಟ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ಮಹಿಳೆಯರು ಕ್ರೀಡಾಕೂಟದಲ್ಲಿ ಭಾಗವಹಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕು ಎಂದರು.

ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಯೋಜನಾಧಿಕಾರಿ ಪ್ರಕಾಶ್ ರೈ, ನಾಕೂರು ತೋಟದ ವ್ಯವಸ್ಥಾಪಕ ಕೃಷ್ಣಭಟ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಕೃಷಿ ಮೇಲ್ವಿಚಾರಕ ನಾಗರಾಜು, ಮೇಲ್ವಿಚಾರಕಿ ಸರಸ್ವತಿ, ನಾಕೂರು-ಶಿರಂಗಾಲ ಗ್ರಾ.ಪಂ. ಉಪಾಧ್ಯಕ್ಷೆ ಯಶೋದ ಉಪಸ್ಥಿತರಿದ್ದರು.