ಸೋಮವಾರಪೇಟೆ, ಫೆ. 22: ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಸಮಾಜದಲ್ಲಿ ಅವರು ಮೌಲ್ಯಯುತ ಜೀವನವನ್ನು ನಡೆಸಲು ಅನುಕೂಲವಾಗುವ ಮಾರ್ಗದರ್ಶನವನ್ನು ಶಿಕ್ಷಕರು ಹಾಗೂ ಪೋಷಕರು ನೀಡಬೇಕೆಂದು ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಾಧೀಶ ಶ್ಯಾಂಪ್ರಕಾಶ್ ಹೇಳಿದರು.

ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಶಿಶು ಅಭಿವೃದ್ದಿ ಯೋಜನಾ ಇಲಾಖಾ ವತಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಸಾಮಾಜಿಕ ನ್ಯಾಯ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಕಾನೂನು ಸಾಕ್ಷರತಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಕೇವಲ ಶಿಕ್ಷಣವನ್ನು ನೀಡಿದರೆ ಮಾತ್ರ ಸಾಲದು. ಇಂದಿನÀ ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೆಚ್ಚಿನ ಪೈಪೋಟಿ ಇರುವದರಿಂದ ಪ್ರತಿಯೋರ್ವ ವಿದ್ಯಾರ್ಥಿಗಳು ಉನ್ನತ ಶಿಕ್ಷಣದೊಂದಿಗೆ ಹೆಚ್ಚಿನ ಅಂಕ ಪಡೆಯುವತ್ತ ಗಮನಹರಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಮಾತನಾಡಿದರು.

ವೇದಿಕೆಯಲ್ಲಿ ಬಿಸಿಎಂ ಇಲಾಖೆಯ ವಿಸ್ತರಣಾಧಿಕಾರಿ ಶ್ರೀನಿವಾಸ್, ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ವಕೀಲರಾದ ಹೆಚ್.ಆರ್. ಪವಿತ್ರ, ಪ್ರಭಾರ ಶಿಶು ಅಭಿವೃಧ್ದಿ ಯೋಜನಾಧಿಕಾರಿ ಯಶೋದ, ಶೈಲ ಮತ್ತಿತರರು ಉಪಸ್ಥಿತರಿದ್ದರು.