ಮಡಿಕೇರಿ, ಫೆ. 25: ಕೊಡಗು ಜಿಲ್ಲಾ ಮುಸ್ಲಿಂ ಕ್ರೀಡಾ ಮತ್ತು ಸಾಂಸ್ಕøತಿಕ ಸಂಸ್ಥೆ ವತಿಯಿಂದ 9ನೇ ವರ್ಷದ ಕೊಡಗು ಜಿಲ್ಲಾ ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿಯನ್ನು ಏ. 22 ಮತ್ತು 23 ರಂದು ವೀರಾಜ ಪೇಟೆಯಲ್ಲಿ ಆಯೋಜಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಕೆ.ಎಂ. ಕುಂಞÂ ಅಬ್ದುಲ್ಲಾ ಜಿಲ್ಲೆಯ ಪ್ರತೀ ಜಮಾಅತ್‍ನಿಂದ ಒಂದು ತಂಡ ಪಂದ್ಯಾವಳಿಯಲ್ಲಿ ಭಾಗವಹಿಸಲು ಅವಕಾಶವಿದ್ದು, 50 ರಿಂದ 60 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು. ಎರಡು ದಿನಗಳ ಹೊನಲು ಬೆಳಕಿನ ಈ ಪಂದ್ಯಾವಳಿಗೆ ರಾಜ್ಯ ಹಾಗೂ ಜಿಲ್ಲಾಮಟ್ಟದ ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ಮುಖಂಡರನ್ನು ಅತಿಥಿಗಳನ್ನಾಗಿ ಆಹ್ವಾನಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಭಾವೈಕ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಗ್ರಾಮೀಣ ಮಟ್ಟದಲ್ಲಿರುವ ಎಲ್ಲಾ ಸಮಾಜದ ಪ್ರತಿಭಾವಂತ ವಾಲಿಬಾಲ್ ಆಟಗಾರರನ್ನು ಆಯ್ಕೆ ಮಾಡಿ ರಾಜ್ಯಮಟ್ಟದ ತರಬೇತುದಾರರಿಂದ ತರಬೇತಿ ಕೊಡಿಸಿ ಜಿಲ್ಲಾಮಟ್ಟದ ವಾಲಿಬಾಲ್ ತಂಡವನ್ನು ರಚಿಸುವ ಮತ್ತು ಆ ಮೂಲಕ ರಾಜ್ಯಮಟ್ಟದ ಕ್ರೀಡೆಗಳಲ್ಲಿ ಈ ತಂಡ ಜಿಲ್ಲೆಯನ್ನು ಪ್ರತಿನಿಧಿಸುವಂತೆ ಮಾಡುವ ಗುರಿ ಹೊಂದಲಾಗಿದೆ. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಸಂಸ್ಥೆ ಭರಿಸಲಿದೆ ಎಂದು ಕೆ.ಎಂ. ಕುಂಞÂ ಅಬ್ದುಲ್ಲಾ ಹೇಳಿದರು.
ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸರಕಾರ ಈಗಾಗಲೇ ರಾಷ್ಟ್ರಮಟ್ಟದ ‘ನೀಟ್’ ಮಾದರಿಯ ಪರೀಕ್ಷೆ ನಡೆಸಲಿದ್ದು, ವೈದ್ಯಕೀಯ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರಕಾರದ ವತಿಯಿಂದ ಉಚಿತ ತರಬೇತಿ ಕೇಂದ್ರವನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ ತಮ್ಮ ಸಂಸ್ಥೆ ವತಿಯಿಂದ ಈ ಬಾರಿ ವೈದ್ಯಕೀಯ ಶಿಕ್ಷಣ ಪ್ರವೇಶ ಬಯಸುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ತೀರ್ಮಾನಿಸಿದೆ ಎಂದು ಕೆ.ಎಂ. ಕುಂಞÂ ಅಬ್ದುಲ್ಲಾ ತಿಳಿಸಿದರು.
ಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷ ಪಿ.ಎ. ಕರೀಂ, ಕಾರ್ಯದರ್ಶಿ ಎಂ.ಎಂ. ಇಸ್ಮಾಯಿಲ್, ನಿರ್ದೇಶಕರಾದ ಹಂಸ, ಮನ್ಸೂರ್ ಆಲಿ ಹಾಗೂ ಸಾದಿಕ್ ಉಪಸ್ಥಿತರಿದ್ದರು.