ಮಡಿಕೇರಿ, ಫೆ. 27 : ಸಾಮಾಜಿಕ ಭದ್ರತಾ ಯೋಜನೆ ಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ವಾಸಸ್ಥಳ/ ವಿಳಾಸ ಬದಲಾವಣೆ ಮಾಡಿದ್ದಲ್ಲಿ ತಮ್ಮ ವ್ಯಾಪ್ತಿಯ ಕಂದಾಯ ಅಧಿಕಾರಿಗಳಿಗೆ ಬದಲಾದ ವಿಳಾಸದ ಮಾಹಿತಿಯನ್ನು ಪಿಂಚಣಿ ಮಂಜೂರಾತಿ ನಿಯಮ 28ರನ್ವಯ ಕಡ್ಡಾಯವಾಗಿ ಸಲ್ಲಿಸಬೇಕಾಗಿದೆ. ಕೇಂದ್ರ ಸರ್ಕಾರದ ನೇರ ಹಣ ಸಂದಾಯ ಯೋಜನೆಯಡಿ, ಪ್ರತಿ ಫಲಾನುಭವಿಯು ಸರ್ಕಾರದ ಸವಲತ್ತುಗಳನ್ನು ಪಡೆಯಲು ಆಧಾರ್ ಸಂಖ್ಯೆ, ಬ್ಯಾಂಕ್ ಅಥವಾ ಅಂಚೆ ಖಾತೆ ಸಂಖ್ಯೆ ಮತ್ತು ಆಧಾರ್ ಜೋಡಣೆಗೆ ಒಪ್ಪಿಗೆಯನ್ನು ನೀಡುವುದು ಕಡ್ಡಾಯವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ವಾಸಸ್ಥಳ ಬದಲಾವಣೆ ಮಾಡಿದ್ದಲ್ಲಿ ಬದಲಾದ ವಿಳಾಸದ ಜೊತೆಗೆ ಆಧಾರ್ ಸಂಖ್ಯೆ, ಬ್ಯಾಂಕ್/ಖಾತೆ ವಿವರ ಮತ್ತು ಮೊಬೈಲ್ ಸಂಖ್ಯೆಯನ್ನು ಆಧಾರ್ ಜೋಡಣೆಯ ಒಪ್ಪಿಗೆ ಪತ್ರದೊಂದಿಗೆ ತಮ್ಮ ವ್ಯಾಪ್ತಿಯ ಕಂದಾಯಾಧಿಕಾರಿ ಗಳಿಗೆ ಫೆಬ್ರವರಿ, 28 ರೊಳಗೆ ಖುದ್ದಾಗಿ ಸಲ್ಲಿಸಲು ಈ ಮೂಲಕ ಸೂಚನೆ ನೀಡಲಾಗಿದೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಪಿಂಚಣಿ ಯನ್ನು ಸ್ಥಗಿತಗೊಳಿಸ ಲಾಗುವದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.