ಸೋಮವಾರಪೇಟೆ, ಮಾ. 1: ಸಮೀಪದ ಗೌಡಳ್ಳಿ ಪ್ರೌಢಶಾಲೆಯ ಸುವರ್ಣಮಹೋತ್ಸವ ಅಂಗವಾಗಿ ಶಾಲಾ ಆವರಣದಲ್ಲಿ ಸ್ಥಾಪಿಸಿರುವ ಶಾಲೆಯ ಸ್ಥಾಪಕ ಅಧ್ಯಕ್ಷರಾದ ದಿವಂಗತ ವಿ.ಟಿ.ಈರಪ್ಪ ಅವರ ಪುತ್ಥಳಿಯನ್ನು ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಅನಾವರಣ ಗೊಳಿಸಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಸದ್ದುದ್ದೇಶದಿಂದ ಕಳೆದ 50ವರ್ಷಗಳ ಹಿಂದೆ ಗ್ರಾಮೀಣ ಭಾಗದಲ್ಲಿ ಶಾಲೆಯೊಂದನ್ನು ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿ, ಅದರಲ್ಲಿ ಯಶ ಕಂಡ ಮಹನೀಯರ ಆದರ್ಶಗಳನ್ನು ನಾವೆಲ್ಲರು ಮೈಗೂಡಿಸಿಕೊಳ್ಳಬೇಕು ಎಂದು ಮಠಾಧೀಶರಾದ ನಿರ್ಮಲಾ ನಂದನಾಥ ಮಹಾಸ್ವಾಮೀಜಿ ನುಡಿದರು.
ಈ ಸಂದರ್ಭ ಗೌಡಳ್ಳಿ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ಬಿ.ಭರತ್ ಕುಮಾರ್, ಆದಿ ಚುಂಚನಗಿರಿ ಹಾಸನ ಶಾಖಾ ಮಠದ ಶುಂಭುನಾಥ ಸ್ವಾಮೀಜಿ, ರಾಜ್ಯ ಒಕ್ಕಲಿಗರ ಸಂಘದ ಸದಸ್ಯ ಎಚ್.ಕೆ.ಶೇಖರ್, ಶಿಲ್ಪಿ ಮಂಜುನಾಥ್, ಸಂಸ್ಥೆಯ ಪದಾಧಿ ಕಾರಿಗಳಾದ ವಿ.ಎನ್.ನಾಗರಾಜ್, ಎಚ್.ಆರ್.ಮುತ್ತಣ್ಣ, ಪ್ರಮುಖರಾದ ಶುಂಠಿ ನಾಗಭೂಷಣ್, ಜಿಪಂ ಮಾಜಿ ಅಧ್ಯಕ್ಷ ವಿ.ಎಂ.ವಿಜಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.