ಕೂಡಿಗೆ, ಮಾ. 1: ಕೊಡಗು ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಕೊಡಗು ಮತ್ತು ಹಾಸನ ಜಿಲ್ಲಾ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟ ನಿಯಮಿತ ಇವರ ಸಂಯುಕ್ತಾಶ್ರ್ರಯದಲ್ಲಿ ಸಿರಿಧಾನ್ಯ ಮತ್ತು ಸಾವಯವ ಉತ್ಪÀನ್ನಗಳ ಮೇಳ ಮತ್ತು ಕುಶಾಲನಗರ ರೈತ ಸಂಪರ್ಕ ಕೇಂದ್ರ ಉದ್ಘಾಟನಾ ಕಾರ್ಯಕ್ರಮವು ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿ ತಾ. 4ರಂದು ನಡೆಯಲಿದೆ.
ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಸಂಸದ ಪ್ರತಾಪ್‍ಸಿಂಹ, ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಮತ್ತಿತರರು ಆಗಮಿಸಲಿದ್ದಾರೆ ಎಂದು ಸೋಮವಾರಪೇಟೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಡಾ. ಹೆಚ್.ಎಸ್. ರಾಜಶೇಖರ್ ತಿಳಿಸಿದ್ದಾರೆ.