ಮಡಿಕೇರಿ, ಮಾ. 3: ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಹಾಗೂ ಕೊಡಗು ಮತ್ತು ಹಾಸನ ಜಿಲ್ಲಾ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟ ನಿಯಮಿತ ಇವರ ಸಂಯುಕ್ತ ಆಶ್ರಯದಲ್ಲಿ ತಾ. 4 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಕೂಡಿಗೆಯ ಕೃಷಿ ಕ್ಷೇತ್ರ ಆವರಣದಲ್ಲಿ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಮೇಳ ಮತ್ತು ಕುಶಾಲನಗರದ ರೈತ ಸಂಪರ್ಕ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿ.ಪಂ. ಸಿಇಓ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಇತರರು ಪಾಲ್ಗೊಳ್ಳಲಿದ್ದಾರೆ.