ಮಡಿಕೇರಿ, ಮಾ. 6 : ವಿದ್ಯಾರ್ಥಿಗಳಲ್ಲಿ ಅಡಗಿರುವ ಪಠ್ಯೇತರ ಚಟುವಟಿಕೆಗಳ ಪ್ರತಿಭಾ ಕೌಶಲ್ಯವನ್ನು ಪ್ರತಿಬಿಂಬಿಸುವ ಮತ್ತು ಪ್ರೋತ್ಸಾಹಿಸುವ ಕಾರ್ಯವನ್ನು ಗುರುವಿನ ಸ್ಥಾನದಲ್ಲಿರುವ ಅಧ್ಯಾಪಕರುಗÀಳು ಮಾಡುತ್ತಿರುವದು ಶ್ಲಾಘನೀಯವೆಂದು ಕೊಡಗು ಚಾನಲ್ನ ನಿರ್ದೇಶಕರಾದ ಜಿ.ವಿ.ರವಿಕುಮಾರ್ ತಿಳಿಸಿದ್ದಾರೆ.
ಮಂಗಳೂರು ವಿಶ್ವ ವಿದ್ಯಾ ನಿಲಯದ ಕಾಲೇಜುಗಳ ಸಿಬ್ಬಂದಿಗಳಿ ಗಾಗಿ ನಗರದ ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಅಂತರ ಕಾಲೇಜು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡಾ ಸಮಾರಂಭವನ್ನು ಉದ್ಘಾಟಿಸಿ, ಮಾತನಾಡಿದ ಐಎನ್ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಪ್ರತಿದಿನ ಶೈಕ್ಷಣಿಕವಾಗಿ ಪಠ್ಯಕ್ರಮದಲ್ಲೇ ತಮ್ಮನ್ನು ತೊಡಗಿಸಿಕೊಳ್ಳುವ ಶಿಕ್ಷಕವೃಂದ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವಲ್ಲಿ ಯಶಸ್ವಿಯಾಗಿದೆ ಎಂದರು.
ಮಂಗಳೂರು ವಿಶ್ವ ವಿದ್ಯಾಲಯದ ದೈಹಿಕ ಶಿಕ್ಷಣ ಮುಖ್ಯಸ್ಥರಾದ ಡಾ.ಕಿಶೋರ್ ಕುಮಾರ್ ಮಾತನಾಡಿ, ಬೋದಕ ವರ್ಗ ಹಾಗೂ ಸಿಬ್ಬಂದಿಗಳು ದೈನಂದಿನ ಕಾರ್ಯದಿಂದ ಹೊರ ಬಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳ ಬೇಕೆಂಬದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ಪಾರ್ವತಿ ಅಪ್ಪಯ್ಯ, ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯಗಳ ಅಂತರ ಕಾಲೇಜು ಸಿಬ್ಬಂದಿಗಳ ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾಟದಲ್ಲಿ 10 ತಂಡಗಳು, ಥ್ರೋ ಬಾಲ್ನಲ್ಲಿ 8 ತಂಡಗಳು