ನಾಪೆÇೀಕ್ಲು, ಮಾ. 5: ಜಿಲ್ಲೆಯ ಐತಿಹಾಸಿಕ ಕ್ಷೇತ್ರ ಎಮ್ಮೆಮಾಡು ಸೂಫಿ ಸಯ್ಯಿದ್ ದರ್ಗಾಕ್ಕೆ ತೆರಳುವ ರಸ್ತೆಯನ್ನು 4 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವದು ಎಂದು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಮ್ ಹೇಳಿದರು.ವಾರ್ಷಿಕ ಉರೂಸ್ ಕಾರ್ಯಕ್ರಮಕ್ಕೆ ಎಮ್ಮೆಮಾಡುವಿಗೆ ಇಂದು ಆಗಮಿಸಿದ ಅವರು ಸೂಫಿ ಸಯ್ಯಿದ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ ಮಾತನಾಡಿದರು. ಸಾದು, ಸಂತರಿಂದ
(ಮೊದಲ ಪುಟದಿಂದ) ನಮ್ಮ ದೇಶ ನೆಮ್ಮದಿಯ ಬೀಡಾಗಿದೆ. ಇದಕ್ಕೆ ಎಮ್ಮೆಮಾಡು ಉದಾಹರಣೆಯಾಗಿದೆ. ಇಂತಹ ಕೊಡಗಿನ ಜನರ ಸೇವೆ ಮಾಡುವ ಅವಕಾಶ ನನಗೆ ಲಭಿಸಿದೆ. ಆದರೆ ಕಳೆದ 10 ವರ್ಷಗಳಲ್ಲಿ ಜಿಲ್ಲೆಯ ಜನರ ನಡುವೆ ಶಾಂತಿ ಕದಡುವ ಕೆಲಸವಾಗುತ್ತಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ವರ್ಗದ ಜನರು ಪರಸ್ಪರ ಸ್ನೇಹ ಸೌಹಾರ್ದದಿಂದ, ಸುಖ, ಶಾಂತಿಯಿಂದ ಜೀವಿಸಲಿ ಎಂದು ಭಗವಂತನನ್ನು ಪ್ರಾರ್ಥಿಸಿರುವದಾಗಿ ತಿಳಿಸಿದರು.
ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ ಮಾತನಾಡಿ ಉಸ್ತುವಾರಿ ಸಚಿವರು ಎಮ್ಮೆಮಾಡು ರಸ್ತೆ ಅಭಿವೃದ್ಧಿಗೆ 4 ಕೋಟಿ ರೂ. ಮಂಜೂರು ಮಾಡಿರುವದು ಸಂತಸ ತಂದಿದೆ. ಮೊದಲು ನಾವು ಒಂದಾಗಬೇಕು. ನಂತರ ಸಮಾಜದ ಇತರ ಧರ್ಮದವರೊಂದಿಗೆ ಒಂದಾಗಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
ರಾಜ್ಯ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಸ್.ಎ.ಹುಸೈನ್ ಮಾತನಾಡಿ, ಇಸ್ಲಾಂ ಧರ್ಮದ ಸಾಮಾಜಿಕ ನ್ಯಾಯ, ಧ್ಯೇಯವನ್ನು ಕಾಂಗ್ರೆಸ್ ಪಕ್ಷದಲ್ಲಿ ಕಾಣುತ್ತಿದ್ದು, ಇಸ್ಲಾಂ ಧರ್ಮದ ಬಗ್ಗೆ ತಪ್ಪು ಕಲ್ಪನೆಯನ್ನು ಹರಡುವ ಕಾರ್ಯವನ್ನು ಇತ್ತೀಚಿಗೆ ಕಾಣುತ್ತಿದ್ದೇವೆ ಈ ಬಗ್ಗೆ ಎಲ್ಲರು ಜಾಗೃತರಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಎಂ.ಹೆಚ್. ಅಬ್ದುಲ್ ರಹಿಮಾನ್ ವಹಿಸಿದ್ದರು.
ವೇದಿಕೆಯಲ್ಲಿ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್, ರಾಜ್ಯ ಕೆ.ಎಸ್.ಆರ್.ಟಿ.ಸಿ ನಿರ್ದೇಶಕ ಸೌಕತ್ ಅಲಿ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಉಸ್ಮಾನ್ ನಾಪೆÇೀಕ್ಲು ಗ್ರಾ. ಪಂ. ಅಧ್ಯಕ್ಷ ಕೆ.ಎ.ಇಸ್ಮಾಯಿಲ್ ಮತ್ತಿತರರು ಇದ್ದರು.