ಗುಡ್ಡೆಹೊಸೂರು, ಮಾ. 6: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಮೊರಾರ್ಜಿದೇಶಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ಆಶ್ರಮ ಶಾಲೆಯ ಬುಡಕಟ್ಟು ವಿಧ್ಯಾರ್ಥಿ ಗಳಿಂದ ಸಾಂಸ್ಕøತಿಕ ಉತ್ಸವ-20017 ಅದ್ಧೂರಿಯಾಗಿ ನಡೆಯಿತು. ಜಿಲ್ಲಾ ಮಟ್ಟದಾಗಿದ್ದು ಜಿಲ್ಲೆಯ ಒಟ್ಟು 11 ಶಾಲೆಯ ವಿದ್ಯಾರ್ಥಿಗಳ ತಂಡ ಭಾಗವಹಿಸಿದ್ದವು. ಕೊಡಗು ಜಿಲ್ಲಾ. ಪಂಚಾಯ್ತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಈ ಉತ್ಸವ ಕಾರ್ಯಕ್ರಮ ನಡೆಯಿತು. ಗುಡ್ಡೆಹೊಸುರು ಗ್ರಾ. ಪಂ. ಅಧ್ಯಕ್ಷೆ ಭಾರತಿ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಪ್ರಕಾಶ್ ಅವರು ಈ ಸಂಧರ್ಭ ಉತ್ಸವದ ಉದ್ದೇಶದ ಬಗ್ಗೆ ಪ್ರಾಸ್ತಾವಿಕ ನುಡಿಯಾಡಿದರು. ಜಿಲ್ಲಾ. ಪಂ. ಸದಸ್ಯ ಲತೀಫ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ರಾಜಾರಾವ್ ಅವರು ಮುಖ್ಯ ಅಥಿತಿಗಳಾಗಿ ಆಗಮಿಸಿ ಜಿಲ್ಲೆಯಲ್ಲಿ ರುವ ಆಶ್ರಮ ಶಾಲೆಗಳ ಸ್ಥಿತಿಗತಿಗಳ ಬಗ್ಗೆ ಮತ್ತು ಬುಡಕಟ್ಟು ಜನಾಂಗದ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಲು ಈ ರೀತಿಯ ಕಾರ್ಯಕ್ರಮ ಗಳು ಮುಖ್ಯವೆಂದು ಅಭಿಪ್ರಾಯ ಪಟ್ಟರು. ಮತ್ತೊಬ್ಬ ಅತಿಥಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಚಾರುಲತ ಅವರು ಮಾತನಾಡಿದರು. ಈ ಸಂಧರ್ಭ ತಾಲೂಕು ಪಂಚಾಯ್ತಿ ಉಪಾಧ್ಯಕ್ಷ ಅಭಿಮನ್ಯುಕುಮಾರ್ ಮತ್ತು ತಾಲೂಕು ಪಂಚಾಯಿ ಸದಸ್ಯೆ ಪುಷ್ಪ, ಜಿಲ್ಲಾ ಬುಡಕಟ್ಟು ಸಂಘದ ಅಧ್ಯಕ್ಷ ಜೆ.ಪಿ. ರಾಜು, ಲ್ಯಾಂಪ್ಸ್ ಸಹಕಾರ ಸಂಘ ನಿರ್ದೇಶಕ ಬಿ. ಕೆ. ಮೋಹನ ಮತ್ತು ಗ್ರಾ.ಪಂ. ಸದಸ್ಯ ಕಾವೇರಪ್ಪ ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು. ಮೂರಾರ್ಜಿ ವಸತಿ ಶಾಲೆಯ ಶಿಕ್ಷಕ ರಮೇಶ್ ಅವರು ಕಾರ್ಯಕ್ರಮ ನಿರೂಪಿಸಿದರು. ಸಂಜೆ ತನಕವು ಆಶ್ರಮ ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ಮತ್ತು ಶಿಕ್ಷಕ ವೃಂದ ಭಾಗವಹಿಸಿದ್ದರು.
-ಗಣೇಶ್ಕುಡೆಕ್ಕಲ್.