ಮಡಿಕೇರಿ, ಮಾ. 7: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕು, ಕುಶಾಲನಗರ ಹೋಬಳಿ, ಬಸವನತ್ತೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಉಗ್ರಾಣ ಮಳಿಗೆಯ ನಿರ್ಮಾಣ ಕಾಮಗಾರಿಗೆ ಅಡಚಣೆಯಾಗಿರುವ 110 ತೇಗದ ಮರಗಳನ್ನು ತೆರವುಗೊಳಿಸಿಕೊಡುವಂತೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ.
ಈ ಹಿನ್ನೆಲೆ ತೇಗದ ಮರ ಕಡಿದು ಸರ್ಕಾರಿ ನಾಟಾ ಸಂಗ್ರಹಾಲಯಕ್ಕೆ ಸಾಗಿಸಿ ತೆರವುಗೊಳಿಸುವ ಬಗ್ಗೆ ಸಾರ್ವಜನಿಕರಿಂದ ಯಾವದೇ ಆಕ್ಷೇಪಣೆ ಇದ್ದಲ್ಲಿ 15 ದಿನಗಳ ಒಳಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಡಿಕೇರಿ ವಿಭಾಗ, ಮಡಿಕೇರಿ ಇಲ್ಲಿಗೆ ಸಲ್ಲಿಸಬಹುದು. ನಿಗದಿತ ಅವಧಿಯಲ್ಲಿ ಯಾವದೇ ಆಕ್ಷೇಪಣೆ ಬಾರದಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವದು ಎಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.