ಸೋಮವಾರಪೇಟೆ, ಮಾ. 7: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಲ್ಲಿನ ಒ.ಎಲ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬಿ.ಆರ್. ಸಾಯಿನಾಥ್ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕನ್ನಡದ ಮನಸ್ಸುಗಳು ಒಂದಾಗಬೇಕು. ಕನ್ನಡ ಸಾಹಿತ್ಯ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಹಿರಿದಾಗಿದ್ದು, ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷಾ ಪ್ರೇಮವನ್ನು ಬೆಳೆಸಬೇಕೆಂದು ಅಭಿಪ್ರಾಯಿಸಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜವರ, ಶನಿವಾರಸಂತೆ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಎಂ.ಟಿ. ಸೋಮಶೇಖರ್, ಹಿರಿಯ ಸಾಹಿತಿ ಎಸ್.ಸಿ. ರಾಜಶೇಖರ್, ಓ.ಎಲ್.ವಿ. ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಸೆರಿನ್, ಪ.ಪಂ. ಮಾಜಿ ಅಧ್ಯಕ್ಷೆ ಸುಮಾ ಸುದೀಪ್, ಕಸಾಪ ಪ್ರಮುಖರಾದ ನ.ಲ. ವಿಜಯ. ಅನ್ನಮ್ಮ, ಎಸ್.ಎ. ಮುರಳೀಧರ್, ಎಸ್.ಡಿ. ವಿಜೇತ್, ರಾಣಿ ರವೀಂದ್ರ, ಜಲಾ ಕಾಳಪ್ಪ, ನಳಿನಿ ಗಣೇಶ್, ಎ.ಪಿ. ವೀರರಾಜ್, ಎಸ್.ಪಿ. ಪ್ರಸನ್ನ ಉಪಸ್ಥಿತರಿದ್ದರು.