ಮಡಿಕೇರಿ, ಮಾ. 7: ಪಶ್ಚಿಮಘಟ್ಟ ಪ್ರದೇಶಗಳನ್ನು ವಿಶ್ವ ಪಾರಂಪರಿಕ ತಾಣಕ್ಕೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ರಚನೆಯಾಗಿರುವ ಡಾ. ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಬಿರುನಾಣಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ತಾ. 9 ರಂದು ಬೆಳಿಗ್ಗೆ 10.30 ಗಂಟೆಗೆ ವಿಶೇಷ ಗ್ರಾಮ ಸಭೆ ಏರ್ಪಡಿಸಿ ಕಸ್ತೂರಿ ರಂಗನ್ ವರದಿ ವಿರೋಧಿ ನಿರ್ಣಯ ಕೈಗೊಂಡು ನಂತರ ಪಕ್ಷ ಬೇಧ ಮರೆತು ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಗುವದೆಂದು ಗ್ರಾ.ಪಂ. ಸದಸ್ಯ ಬೊಟ್ಟಂಗಡ ಗಿರೀಶ್ ಪೆಮ್ಮಯ್ಯ ತಿಳಿಸಿದ್ದಾರೆ.