ಗುಡ್ಡೆಹೊಸೂರು, ಮಾ. 7: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ಆಶ್ರಮ ಶಾಲೆಯ ಬುಡಕಟ್ಟು ವಿಧ್ಯಾರ್ಥಿಗಳಿಂದ ಸಾಂಸ್ಕøತಿಕ ಉತ್ಸವ-2017 ಅದ್ಧೂರಿಯಾಗಿ ನಡೆಯಿತು. ಜಿಲ್ಲೆಯ ಒಟ್ಟು 11 ಶಾಲೆಯ ವಿದ್ಯಾರ್ಥಿಗಳ ತಂಡ ಭಾಗವಹಿಸಿದ್ದವು. ಕೊಡಗು ಜಿ. ಪಂ. ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಈ ಉತ್ಸವ ಗುಡ್ಡೆಹೊಸೂರು ಗ್ರಾ.ಪಂ. ಅಧ್ಯಕ್ಷೆ ಭಾರತಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಪ್ರಕಾಶ್ ಅವರು ಉತ್ಸವದ ಉದ್ದೇಶದ ಬಗ್ಗೆ ಪ್ರಾಸ್ತಾವಿಕ ನುಡಿಯಾಡಿದರು. ಜಿ. ಪಂ. ಸದಸ್ಯ ಲತೀಫ್ ಕಾರ್ಯಕ್ರಮ ಉದ್ಘಾಟಿಸಿದರು. ಜಿ.ಪಂ. ಮಾಜಿ ಅಧ್ಯಕ್ಷ ರಾಜಾರಾವ್ ಮುಖ್ಯ ಅಥಿತಿಗಳಾಗಿ ಆಗಮಿಸಿದರು.

ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಚಾರುಲತಾ ಮಾತನಾಡಿದರು. ಈ ಸಂದರ್ಭ ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್ ಮತ್ತು ತಾ.ಪಂ. ಸದಸ್ಯೆ ಪುಷ್ಪ, ಜಿಲ್ಲಾ ಬುಡಕಟ್ಟು ಸಂಘದ ಅಧ್ಯಕ್ಷ ಜೆ.ಪಿ. ರಾಜು, ಲ್ಯಾಂಪ್ಸ್ ಸಹಕಾರ ಸಂಘ ಬಸವನಹಳ್ಳಿ ಇದರ ನಿರ್ದೇಶಕ ಬಿ.ಕೆ. ಮೋಹನ್, ಗಾ.ಪಂ. ಸದಸ್ಯ ಕಾವೇರಪ್ಪ, ಜಿಲ್ಲಾಮಟ್ಟದ ವಿವಿಧ ಇಲಾಖಾಧಿಕಾರಿಗಳು ಈ ಸಂದರ್ಭ ಹಾಜರಿದ್ದರು. ಮೊರಾರ್ಜಿ ವಸತಿ ಶಾಲೆಯ ಶಿಕ್ಷಕ ರಮೇಶ್ ಕಾರ್ಯಕ್ರಮ ನಿರೂಪಿಸಿದರು. ಸಂಜೆ ತನಕವೂ ಆಶ್ರಮ ಶಾಲೆಯ ವಿದ್ಯಾಥಿಗಳಿಂದ ವಿವಿಧ ರೀತಿಯ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ಮತ್ತು ಶಿಕ್ಷಕ ವೃಂದ ಭಾಗವಹಿಸಿದ್ದರು.