ಮಡಿಕೇರಿ, ಮಾ. 7: ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆ ಸಮ್ಮೇಳನ ಆಯೋಜನಾ ಸಮಿತಿ ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣಾ ಕೇಂದ್ರ, ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಹಾಗೂ ಕಾವೇರಿ ಕಾಲೇಜು ಗೋಣಿಕೊಪ್ಪಲು ಸಹಯೋಗದಲ್ಲಿ ್ಲ ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರ 125 ನೇ ಜಯಂತಿಯ ವರ್ಷಾಚರಣೆಯ ಅಂತರ್ರಾಷ್ಟೀಯ ಸಮ್ಮೇಳನದ ಅಂಗವಾಗಿ ಗೋಣಿಕೊಪ್ಪಲು ಕಾವೇರಿ ಕಾಲೇಜು ಸಭಾಂಗಣದಲ್ಲಿ ಅಂಬೇಡ್ಕರ್ ಜ್ಞಾನ ದÀರ್ಶನ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾವೇರಿ ವಿದ್ಯಾಸಂಸ್ಥೆ ಅಧ್ಯಕ್ಷ ಡಾ. ಎ.ಸಿ. ಗಣಪತಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.
‘ಅಂಬೇಡ್ಕರ್ ಕೇವಲ ಒಂದು ಸಮುದಾಯದ ನಾಯಕರಲ್ಲ ಅವರು ದೇಶದ ನಾಯಕ. ಅವರ ಆದರ್ಶ ಚಂತನೆಗಳು ಇಂದಿಗೂ ಪ್ರಸ್ತುತ’ ಎಂದರು. ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣಾ ಕೇಂದ್ರ, ಮೈಸೂರು ವಿಶ್ವವಿದ್ಯಾನಿಲಯದ ಉನ್ನತ ಸಂಶೋಧಕರಾದ ಡಾ. ಡಿ.ಜೆ. ಶಶಿಕುಮಾರ್ ಮಾತನಾಡಿ ಅಂಬೇಡ್ಕರ್ ಜ್ಞಾನ ಶಕ್ತಿಯ ಮೂಲಕ ದೇಶದ ಸಮಾಜದ ಕೊಳಕನ್ನು ಹೋಗಲಾಡಿಸಲು ಶ್ರಮಿಸಿದ ಮಹಾನೀಯ. ಜಾತಿವ್ಯವಸ್ಥೆಯನ್ನು ತೊಡೆದು ಹಾಕಿದರೆ ಮಾತ್ರ ಹಿಂದೂ ಸಮಾಜ ಗಟ್ಟಿಯಾಗಿ ನೆಲೆ ನಿಲ್ಲಲು ಸಾಧ್ಯ ಎಂದು ಹೇಳಿದ ಮಾನವತಾವಾದಿ ಎಂದರು.
ಉಪ ಪ್ರಾಂಶುಪಾಲೆ ಪ್ರೊ. ಎಂ.ಡಿ. ಅಕ್ಕಮ್ಮ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಅಂಬೇಡ್ಕರ್ ಜ್ಞಾನ ದರ್ಶನ ಅಭಿಯಾನ ಸಂಯೋಜಕ ವಿನಯ ಕುಮಾರ್, ವೀರಾಜಪೇಟೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಡಿ. ಮುರುಳಿ, ವಲಯ ಸಂಯೋಜನಾಧಿಕಾರಿ ಸಿದ್ದರಾಜು, ಉಪನ್ಯಾಸಕಿ ಸಿ.ಟಿ. ಕಾವ್ಯ ಉಪಸ್ಥಿತರಿದ್ದರು. ಪ್ರಿಯ ಪೊನ್ನಮ್ಮ ಪ್ರಾರ್ಥಿಸಿದರು. ಕಾವ್ಯ ಸಿ.ಟಿ. ಸ್ವಾಗತಿಸಿದರು. ಸಿ.ಎಂ. ಪೂವಮ್ಮ ವಂದಿಸಿದರು. ಸವಿತಾ ಕುಮಾರಿ ಮತ್ತು ಶ್ರೀಧÀನ್ಯ ನಿರೂಪಿಸಿದರು.