ಭಾಗಮಂಡಲ, ಮಾ. 7: ಸ್ಥಳೀಯ ಗ್ರಾಮಪಂಚಾಯಿತಿ ವ್ಯಾಪ್ತಿಯ ತಣ್ಣಿಮಾನಿ ಗ್ರಾಮದಲ್ಲಿ ಕಸವಿಲೇವಾರಿ ಘಟಕ ನಿರ್ಮಾಣಕ್ಕೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು. ಬಳಿಕ ಕೋರಂಗಾಲ ಗ್ರಾಮದ ರಸ್ತೆ ಹಾಗೂ ಚೇರಂಗಾಲ ಗ್ರಾಮದ ಕಾಂಕ್ರಿಟ್ ರಸ್ತೆ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಮುಂದಿನ ಬಾರಿ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ರಸ್ತೆ, ಕುಡಿಯುವ ನೀರು, ಹಾಗೂ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗುವದು ಎಂದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಕವಿತಾಪ್ರಭಾಕರ್, ಭಾಗಮಂಡಲ ಗ್ರಾಮಪಂಚಾಯಿತಿ ಅಧ್ಯಕ್ಷೆ ಸುಮಿತ್ರಾ, ಉಪಾಧ್ಯಕ್ಷೆ ಭವಾನಿಹರೀಶ್, ಸದಸ್ಯರಾದ ರಾಜುರೈ, ಯೋಗಾನಂದ, ಪುರುಷೋತ್ತಮ, ಜಿಲ್ಲಾಯುವ ಮೋರ್ಚಾ ಅಧ್ಯಕ್ಷ ಕಾಳನ ರವಿ, ಜಿಲ್ಲಾಪಂಚಾಯಿತಿ ಸದಸ್ಯ ಕುಮಾರ, ರಾಜೀವ್ ಎ.ಎನ್, ಸ್ಥಾನೀಯ ಸಮಿತಿ ಅಧ್ಯಕ್ಷ ಕಾಶಿ, ಗ್ರಾಮ ಪಂಚಾಯಿತಿ ಸದಸ್ಯ ದೇವಂಗೋಡಿ ಭಾಸ್ಕರ್, ಅಮೆ ಪದ್ಮಯ್ಯ, ಸುಧೀರ್ ಉಪಸ್ಥಿತರಿದ್ದರು.