ಮಡಿಕೇರಿ, ಮಾ. 7: ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ 36ನೇ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ ವೈ.ಎನ್. ವಿಶಾಲಾಕ್ಷಿಯವರು 200 ಮೀಟರ್ ಓಟದಲ್ಲಿ, 800 ಮೀಟರ್ ಓಟದಲ್ಲಿ ಪ್ರಥಮ, ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ತಾ. 24ರಿಂದ ಮಹಾರಾಷ್ಟ್ರದ ನಾಸಿಕ್‍ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.