ಶ್ರೀಮಂಗಲ, ಮಾ. 7: ಕೆÀಳವರ್ಗದವರಿಗೆ ಆರ್ಥಿಕ ಸಮಸ್ಯೆಯಿಂದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಾಗುವದಿಲ್ಲ ಎಂಬದನ್ನು ಮನಗಂಡು ಗ್ರಾಮೀಣ ಮಟ್ಟದಲ್ಲಿ ಈ ರೀತಿಯ ಉಚಿತ ಆರೋಗ್ಯ ಶಿಬಿರ ಏರ್ಪಡಿಸಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರನ್ನು ಕರೆಸಿ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಕೊಡಿಸುತ್ತಿರುವದು ಶ್ಲಾಘನೀಯ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‍ನ ಮಾಜಿ ಅಧ್ಯಕ್ಷ ಡಾ. ಕಾಳಿಮಾಡ ಕೆ. ಶಿವಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಟಿ. ಶೆಟ್ಟಿಗೇರಿಯ ಸಂಭ್ರಮ ಮಹಿಳಾ ಸಾಂಸ್ಕøತಿಕ ಮತ್ತು ಕ್ರೀಡಾ ಸಂಸ್ಥೆ, ತಾವಳಗೇರಿ ಮೂಂದ್‍ನಾಡ್ ಕೊಡವ ಸಮಾಜ, ಲೋಟಸ್ ರಿಕ್ರಿಯೇಷನ್ ಅಸೋಸಿಯೇಷನ್, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್, ಕೊಡಗು ವೀರಾಜಪೇಟೆ ಹಾಗೂ ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಕೊಡಗು ಘಟಕದ ಸಂಯುಕ್ತ ಆಶ್ರಯದಲ್ಲಿ ಟಿ. ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಸಂಭ್ರಮ ಮಹಿಳಾ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಸ್ಥೆಯ ಅಧ್ಯಕ್ಷೆ ತಡಿಯಂಗಡ ಸೌಮ್ಯ ಕರುಂಬಯ್ಯ ಮಾತನಾಡಿ, ಸಂಭ್ರಮ ಸಂಸ್ಥೆಯೂ ಪ್ರತಿವರ್ಷ ಆರೋಗ್ಯ ಶಿಬಿರದೊಂದಿಗೆ ಕೃಷಿ ಮತ್ತು ತೋಟಗಾರಿಕಾ ಶಿಬಿರ, ವಿವಿಧ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳು ಸೇರಿದಂತೆ ವಿವಿಧ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದೆ ಎಂದರು. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‍ನ ಅಧ್ಯಕ್ಷ ಡಾ. ಮೋಹನ್ ಅಪ್ಪಾಜಿ ಮಾತನಾಡಿ, ತಮ್ಮ ಮನೆ ಬಾಗಿಲಿಗೆ ಬಂದಿರುವ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆಯನ್ನು ಪಡೆದುಕೊಳ್ಳುವದು ಬುದ್ದಿವಂತಿಕೆ. ಜಿಲ್ಲೆಯಲ್ಲಿ ಶೇ. 80ಕ್ಕೂ ಹೆಚ್ಚು ರೋಗಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ವೀರಾಜಪೇಟೆ ಡೆಂಟಲ್ ಕಾಲೇಜಿನಲ್ಲಿ ಅತ್ಯುತ್ತಮ ಸೇವೆ ನೀಡಲಾಗುತ್ತಿದೆ. ಮಡಿಕೇರಿ ಅಶ್ವಿನಿ ಆಸ್ಪತ್ರೆಯಲ್ಲಿ ಈ ಶಿಬಿರದಲ್ಲಿ ವೈದ್ಯರು ಸಲಹೆ ನೀಡಿದ ರೋಗಿಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ ಮಾಡಲಾಗುವದು ಎಂದರು.

ಟಿ. ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷ ಮಚ್ಚಮಾಡ ಸುಮಂತ್, ಕಿರಿಯಮಾಡ ರತನ್ ತಿಮ್ಮಯ್ಯ ಸೇರಿದಂತೆ ಪ್ರಮುಖರು ಮಾತನಾಡಿದರು. ಶಿಬಿರದಲ್ಲಿ ಹಿರಿಯ ವೈದ್ಯರಾದ ಡಾ. ಕಾಳಿಮಾಡ ಶಿವಪ್ಪ, ಡಾ. ಅಪ್ಪನೆರವಂಡ ಸೋನಿಯಾ ಮಂದಪ್ಪ, ಡಾ. ಮುಕ್ಕಾಟಿರ ಗ್ರೀಷ್ಮಾ, ಡಾ. ಮೋಹನ್ ಅಪ್ಪಾಜಿ, ಡಾ. ಮುಕ್ಕಾಟಿರ ಸಂಜು ಪೊನ್ನಪ್ಪ, ಡಾ. ಕಟ್ಟೇರ ವಿನ್ಸಿ ಪೂಣಚ್ಚ, ಡಾ. ಕೇಲೆಟ್ಟಿರ ಎಂ. ಬೋಪಣ್ಣ ಹಾಗೂ ಕೊಲಂಬಿಯಾ ಏಷಿಯಾ ಆಸ್ಪತ್ರೆ ಮೈಸೂರು, ಕೊಡಗು ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮಡಿಕೇರಿ, ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ವೀರಾಜಪೇಟೆ, ಅಶ್ವಿನಿ ಆಸ್ಪತ್ರೆ ಮಡಿಕೇರಿ ಹಾಗೂ ಮೈಸೂರಿನಿಂದ ವಿಶೇಷ ಪರಿಣತಿ ಹೊಂದಿದ ತಜ್ಞ ವೈದ್ಯರು ಆಗಮಿಸಿ ಸ್ತ್ರೀ ರೋಗ, ಪ್ರನಾಳೀಯ ಫಲೀಕರಣ, ಚರ್ಮ ರೋಗ, ಮಕ್ಕಳ ರೋಗ, ವೈದ್ಯ ಶಾಸ್ತ್ರ, ಕಣ್ಣು, ಕಿವಿ, ಮೂಗು, ಗಂಟಲು, ಮೂತ್ರ ರೋಗ, ಹೃದಯ ರೋಗ, ಮೂಳೆ ರೋಗ, ಹಲ್ಲಿನ ಸಮಸ್ಯೆಗೆ ಸಂಬಂಧಿಸಿದಂತೆ ತಪಾಸಣೆ ನಡೆಯಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಭ್ರಮ ಸಂಸ್ಥೆಯ ಸದಸ್ಯೆ ಅಜ್ಜಮಾಡ ಸಾವಿತ್ರಿ ಪ್ರಾರ್ಥಿಸಿ, ಲೋಟಸ್ ಸಂಸ್ಥೆಯ ಕಾರ್ಯದರ್ಶಿ ಚೋಕಿರ ಹ್ಯಾರಿ ಸ್ವಾಗತಿಸಿ, ಸಂಭ್ರಮ ಸಂಸ್ಥೆಯ ಕಾರ್ಯದರ್ಶಿ ಉಳುವಂಗಡ ಕಾವೇರಿ ವಂದಿಸಿ, ಉಪಾಧ್ಯಕ್ಷೆ ಚಂಗುಲಂಡ ಅಶ್ವಿನಿ ಸತೀಶ್ ನಿರೂಪಿಸಿದರು.