ವೀರಾಜಪೇಟೆ, ಮಾ. 7: ಇಲ್ಲಿನ ಕಾವೇರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ವತಿಯಿಂದ ‘ಸಮೂಹ ಮಾಧ್ಯಮ ಮತ್ತು ಉದ್ಯೋಗಾವ ಕಾಶಗಳು’ ಕುರಿತು ಕಾರ್ಯಾಗಾರ ಏರ್ಪಡಿಸಲಾಗಿತ್ತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದ ಕಾವೇರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಅಕ್ರಂ, ಪುರಾತನ ಯುಗದಲ್ಲಿ ಮಗುವಿಗೆ ಮನೆಯೇ ಮೊದಲ ಪಾಠಶಾಲೆ ಅನ್ನುವಂತಿತ್ತು. ಇಂದು ಮಗುವಿಗೆ ಮಾಧ್ಯಮಗಳೇ ಮೊದಲ ಪಾಠಶಾಲೆ ಎನ್ನುವಂತಾಗಿದೆ ಎಂದರು.

ಸಮೂಹ ಮಾಧ್ಯಮಗಳು ಸಮಾಜದ ಆರ್ಥಿಕ, ರಾಜಕೀಯ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕøತಿಕ ಸಮಸ್ಯೆಯನ್ನು ಪರಿಹರಿಸುವಲ್ಲಿ ಶ್ರಮಿಸುತ್ತಿವೆ ದಿನದಿಂದ ದಿನಕ್ಕೆ ಸಮೂಹ ಮಾಧ್ಯಮಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಎಲ್ಲಾ ಕ್ಷೇತ್ರಗಳಲ್ಲಿಯೂ ತನ್ನದೇ ರೀತಿಯಲ್ಲಿ ಪ್ರಭಾವ ಬೀರುತ್ತಿದೆ. ಹಾಗಾಗಿ ನೀವು ಆಯ್ಕೆಮಾಡಿಕೊಂಡ ಕ್ಷೇತ್ರ ತುಂಬ ಗೌರವ ಆದರಗಳಿಂದ ಕೂಡಿದ ಕ್ಷೇತ್ರವಾಗಿದೆ. ಇಲ್ಲಿ ನಿರಂತರ ಓದುವಿಕೆ, ಬರೆಯುವಿಕೆ ಕ್ಷಣಕ್ಷಣದ ಮಾಹಿತಿಗಳನ್ನು ತಿಳಿದುಕೊಳ್ಳುವ ಸಾಮಥ್ರ್ಯ ಇದ್ದರೆ ಮಾತ್ರ ಯಶಸ್ವಿಯಾಗಲು ಸಾಧ್ಯವೆಂದರು.

ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಸೋಮಣ್ಣ, ಪ್ರವೀಣ್ ಕುಮಾರ್, ಆಂಗ್ಲ ವಿಭಾಗದ ಉಪನ್ಯಾಸಕ ತನ್ವೀರ್ ಹಾಜರಿದ್ದರು.