ಮಡಿಕೇರಿ, ಮಾ. 8: ಮಂಗಳೂರು ವಿಶ್ವವಿದ್ಯಾನಿಲಯ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ವತಿಯಿಂದ ತಾ. 9 ಮತ್ತು 10 ರಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರತಿಭೋತ್ಸವ ಹಾಗೂ 68ನೇ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ತಾ. 9 ರಂದು ಬೆಳಿಗ್ಗೆ 10.30 ಗಂಟೆಗೆ ಪ್ರತಿಭೋತ್ಸವ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ ಕುಟ್ಟಪ್ಪ ಹಾಗೂ ಮಡಿಕೇರಿ ಆಕಾಶವಾಣಿಯ ನಿಲಯ ನಿರ್ದೇಶಕ ಎಂ. ರಾಘವೇಂದ್ರ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲೆ ಡಾ. ಪಾರ್ವತಿ ಅಪ್ಪಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.

ತಾ. 10 ರಂದು ಬೆಳಿಗ್ಗೆ 10.30 ಗಂಟೆಗೆ 68ನೇ ಕಾಲೇಜು ವಾರ್ಷಿಕೋತ್ಸವದ ಉದ್ಘಾಟನೆ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಜೇಂದ್ರ ಪ್ರಸಾದ್ ಹಾಗೂ ಜಿಲ್ಲಾ ರೋಟರಿ ಗವರ್ನರ್ ರೊ. ಸುರೇಶ್ ಚಂಗಪ್ಪ, ಮಂಗಳೂರು ವಿಶ್ವವಿದ್ಯಾನಿಲಯದ ಕುಲ ಸಚಿವ ಪ್ರೊ. ಕೆ.ಎಂ. ಲೋಕೇಶ್ ಪಾಲ್ಗೊಳ್ಳಲಿದ್ದಾರೆ.