ಮಡಿಕೇರಿ, ಮಾ. 9: ವಿದ್ಯಾರ್ಥಿಗಳಲ್ಲಿ ಗುರಿ ಇದ್ದರೆ ಯಶಸ್ಸು ಕಾಣಬಹುದು. ಆ ನಿಟ್ಟಿನಲ್ಲಿ ಗುರಿ ಸಾಧಿಸಲು ವಿದ್ಯಾರ್ಥಿಗಳು ಪ್ರಯತ್ನಿಸು ವಂತೆ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಸಲಹೆ ಮಾಡಿದ್ದಾರೆ.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ಪ್ರತಿಭೋತ್ಸವ ಹಾಗೂ 68ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಆಕಾಶವಾಣಿ ನಿಲಯದ ನಿರ್ದೇಶಕ ಎಂ.ರಾಘವೇಂದ್ರ ಅವರು ಮಾತನಾಡಿ ಪ್ರತಿಭೆಯನ್ನು ಹಣ ಕೊಟ್ಟು ಪಡೆದುಕೊಳ್ಳಲು ಅಸಾಧ್ಯ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು. ಅದನ್ನು ಉತ್ತಮ ರೀತಿಯಲ್ಲಿ ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕು ಎಂದು ಹೇಳಿದರು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲೆ ಡಾ. ಪಾರ್ವತಿ ಅಪ್ಪಯ್ಯ ಅವರು ಮಾತನಾಡಿ ವಿದ್ಯಾರ್ಥಿಗಳು ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾರ್ಜನೆಯತ್ತ ಗಮನ ಹರಿಸಬೇಕು. ಜೊತೆಗೆ ಸಾಂಸ್ಕøತಿಕ, ಕ್ರೀಡೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣ ಮಾಡಬೇಕು ಎಂದು ಸಲಹೆ ಮಾಡಿದರು.