ಮಡಿಕೇರಿ, ಮಾ. 9: ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾರ್ಚ್, 11 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕರ್ನಾಟಕ ಏಕೀಕರಣದ 60ನೇ ವರ್ಷಾಚರಣೆ ಕಾರ್ಯಕ್ರಮ ನಡೆಯಲಿದೆ.
ಮಡಿಕೇರಿ ತಾಲೂಕು ಕ.ಸಾ.ಪ ಅಧ್ಯಕ್ಷ ಕುಡೆಕಲ್ ಸಂತೋಷ್ ಅಧ್ಯಕ್ಷತೆ ವಹಿಸಲಿದ್ದು, ಕ.ಸಾ.ಪ. ಜಿಲ್ಲಾ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಉದ್ಘಾಟಿಸುವರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಸಿ.ಚುಮ್ಮಿ ದೇವಯ್ಯ, ಸ.ಪ್ರ.ದ.ಮ.ಕಾ. ಪ್ರಾಂಶುಪಾಲೆ ಡಾ. ಜೆನ್ನಿಫರ್ ಲೋಲಿಟ ಉಪಸ್ಥಿತರಿರುವರು. ಕ.ಸಾ.ಪ. ನಿಕಟಪೂರ್ವ ಅಧ್ಯಕ್ಷ ಮುನಿರ್ ಅಹ್ಮದ್, ಏಕೀಕರಣದ ಬಗ್ಗೆ ವಿಚಾರ ಮಂಡನೆ ಮಾಡುವರು. ಹಿರಿಯ ಕಲಾವಿದೆ ಮತ್ತು ಸಮಾಜ ಸೇವಕಿ ಅಂಬೆಕಲ್ಲು ಸುಶೀಲ ಕುಶಾಲಪ್ಪ ಅವರನ್ನು ಸನ್ಮಾನಿಸಲಾಗುವದು ಎಂದು ಪ್ರಕಟಣೆ ತಿಳಿಸಿದೆ.