ನಾಪೆÇೀಕ್ಲು, ಮಾ. 9: ನಾಪೆÇೀಕ್ಲು ಪಟ್ಟಣದ ಸುತ್ತಮುತ್ತ ಕಾಣಿಸಿಕೊಂಡಿರುವ ಜಾಂಡೀಸ್ ರೋಗವು ಹೆಪಾಟೈಟಿಸ್ ‘ಎ’ ಎಂಬ `ಪಿ’ ಪಿಕಾರ್ನೂ ವೈರಸ್‍ನಿಂದ ಹರಡುತ್ತಿದ್ದು, ಸಾರ್ವಜನಿಕರು ಎಚ್ಚರವಹಿಸಬೇಕೆಂದು ವೈದ್ಯ ವಲ್ಲಂಡ ಡಾ. ಚಂಗಪ್ಪ ಸಲಹೆಯಿತ್ತರು.

ಈ ವೈರಸ್ ಲಿವರ್‍ಗೆ ತಲುಪಿ ವೃದ್ಧಿಯಾಗಿ ರೋಗ ಲಕ್ಷಣಗಳು ಹೊರ ಹೊಮ್ಮಲು ಸರಾಸರಿ 30 ದಿವಸಗಳು ಬೇಕಾಗುತ್ತದೆ. ಈ ರೋಗದ ತೀವ್ರತೆ ಮಕ್ಕಳಲ್ಲಿ ಕಡಿಮೆ ಪ್ರಮಾಣದಲ್ಲಿದ್ದು, ದೊಡ್ಡವರಲ್ಲಿ ಹೆಚ್ಚಾಗಿರುತ್ತದೆ. ಹೆಪಾಟೈಟಿಸ್ ‘ಎ’ ಯ ರೋಗ ಲಕ್ಷಣಗಳು 3 ವಾರದವರೆಗೂ ಇದ್ದು, ಸಮಾರು 9 ವಾರಗಳಲ್ಲಿ ಸಂಪೂರ್ಣ ಗುಣವಾಗುತ್ತದೆ. ಕೆಲವರಲ್ಲಿ ವಾಸಿಯಾಗಲು 3 ತಿಂಗಳು ಬೇಕಾಗಬಹುದು.

ರೋಗ ಲಕ್ಷಣಗಳು ಕಂಡುಬರುವ 2 ವಾರಗಳವರೆಗೆ ಈ ರೋಗಾಣು ಮಲದಲ್ಲಿ ವಿಸರ್ಜನೆಯಾಗುತ್ತಿರುತ್ತದೆ. 3 ವಾರಗಳಲ್ಲಿ ಈ ವೈರಸ್ ತಾವಾಗಿಯೇ ಸ್ವಯಂ ನಿರ್ನಾಮಗೊಂಡು, ರೋಗಿ ತಾನಾಗಿಯೇ ಗುಣಮುಖವಾಗುತ್ತಾನೆ ಇದನ್ನು ವೈದ್ಯಕೀಯ ವಲಯದಲ್ಲಿ “ಸೆಲ್ಫ್ ಲಿಮಿಟಿಂಗ್” ಎನ್ನುತ್ತಾರೆ.

ಮುಖ್ಯವಾಗಿ ಹೊಟ್ಟೆ ಹಸಿವು ಕಡಿಮೆಯಾಗುವದು, ಬಲಗಡೆ ಹೊಟ್ಟೆಯ ಮೇಲ್ಬಾಗದಲ್ಲಿ ನೋವು ಬರುವದು, ಆಗಾಗ ವಾಂತಿಯಾಗುವದು ಮತ್ತು ವಿಪರೀತ ಸುಸ್ತು ಸಂಕಟವಾಗುವದು ಹೆಪಾಟೈಟಿಸ್‍ನ ಲಕ್ಷಣಗಳಾಗಿವೆ.

ನಾಟಿ ಔಷಧಿ, ಅಲೋಪತಿ ಔಷಧಿ, ಯಾವದೇ ಮಾಡಿದರು ದಿನಕ್ಕೆ 3 ಗ್ಲಾಸ್ ನಿಂಬೆ ಹಣ್ಣು, ಕಿತ್ತಳೆ, ಮೂಸಂಬಿ ಅಥವಾ ಕಬ್ಬಿನ ರಸವನ್ನು ಮತ್ತು 3 ಚಮಚ ಗ್ಲೂಕೋಸ್ ಹಾಕಿ ಕರಗಿಸಿ ಕುಡಿದರೆ ಈ ರೋಗ ಬೇಗ ಗುಣಮುಖವಾಗುತ್ತದೆ.

ಮುನ್ನೆಚ್ಚರಿಕೆ ಕ್ರಮಗಳು: ಮಲವಿಸರ್ಜನೆ ಮಾಡಿದ ನಂತರ ಚೆನ್ನಾಗಿ ಸೋಪಿನಿಂದ ಕೈ ತೊಳೆದುಕೊಳ್ಳಬೇಕು. ಕುಡಿಯುವ ನೀರನ್ನು ಕಡೇ ಪಕ್ಷ 5 ನಿಮಿಷಗಳಾದರೂ ಕುದಿಸಿ ಕುಡಿಯಬೇಕು. ರಸ್ತೆಯ ಬದಿಯಲ್ಲಿ ಮಾಡುವ ತಿಂಡಿ-ತಿನಿಸ್ಸು, ಹಣ್ಣು-ಹಂಪಲುಗಳನ್ನು ತಿನ್ನಬಾರದು ಎಂದು ಸಲಹೆ ನೀಡಿದರು.