ನಾಪೆÇೀಕ್ಲು, ಮಾ. 9: ಗ್ರಾಮಾಂತರ ಪ್ರದೇಶದಲ್ಲಿ ಅದರಲ್ಲೂ ತನ್ನದೇ ಊರಿನ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಉಮಾ ಭಾರತಿ ಅವರ ಮನೋಭಾವನೆಯು ಶ್ಲಾಘನೀಯ ಎಂದು ಮುಳಿಯ ಕೇಶವ ಪ್ರಸಾದ್ ಹೇಳಿದರು.

ಸ್ಥಳೀಯ ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ಇಂಟರ್ಯಾಕ್ಟ್ ಕ್ಲಬ್ ವತಿಯಿಂದ ಶಾಲೆಯ ಹಳೇ ವಿದ್ಯಾರ್ಥಿನಿ ಡಾ. ಎಂ.ಎನ್. ಉಮಾ ಭಾರತಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಹುಟ್ಟೂರಿನಲ್ಲಿ ವೃತ್ತಿಯನ್ನು ಆರಂಭಿಸಿದ ಡಾ. ಉಮಾ ಭಾರತಿ ಅವರ ನಿರ್ಧಾರ ಎಲ್ಲರಿಗೂ ಆದರ್ಶ ಪ್ರಾಯವಾಗಿದೆ. ಇವರನ್ನು ನೋಡಿಯಾದರೂ ಗ್ರಾಮೀಣ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಲು ಹೆಚ್ಚು ಹೆಚ್ಚು ವೈದ್ಯರು ಮನಸ್ಸು ಮಾಡಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಜಾಲಿ ಬೋಪಯ್ಯ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಪೆÇ್ರ. ಕೆ.ಎಂ. ಪೂಣಚ್ಚ, ಆಡಳಿತ ಮಂಡಳಿ ನಿರ್ದೇಶಕ ಎಂ.ಎಸ್. ಸುಬ್ರಮಣ್ಯ, ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಪೆÇ್ರ. ಬಿ.ಸಿ. ಪೆÇನ್ನಪ್ಪ, ರೋಟರಿ ಮಿಸ್ಟಿ ಹಿಲ್ಸ್ ಕಾರ್ಯದರ್ಶಿ ಡಾ. ನವೀನ್, ಶಿಕ್ಷಕ ವೃಂದÀ ಇದ್ದರು.