ಸೋಮವಾರಪೇಟೆ, ಮಾ. 9: ತಾಲೂಕಿನ ತೊರೆನೂರು ಗ್ರಾಮದಲ್ಲಿ ನೂತನವಾಗಿ 56 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರೀ ಬಸವೇಶ್ವರ ದೇವಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ದೇವಾಲಯ ನಿರ್ಮಾಣಕ್ಕೆ 5 ಲಕ್ಷ ರೂ. ಅನುದಾನ ಒದಗಿಸುವದಾಗಿ ಭರವಸೆ ನೀಡಿದರು. ಪ್ರತಿ ಗ್ರಾಮಗಳಲ್ಲೂ ದೇವಾಲಯಗಳು ನಿರ್ಮಾಣವಾಗಬೇಕು. ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭ ಜಿಲ್ಲೆಯಲ್ಲಿ ದೇವಾಲಯಗಳು ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗಿತ್ತು. ಆದರೆ ಈಗಿನ ಸರ್ಕಾರ ದೇವಾಲಯ ನಿರ್ಮಾಣಕ್ಕೆ ಅನುದಾನ ನೀಡುವ ಆಸಕ್ತಿ ವಹಿಸುತ್ತಿಲ್ಲವೆಂದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀಶಾಂv Àಮಲ್ಲಿಕಾರ್ಜುನ ಸ್ವಾಮೀಜಿ ಅವರು, ಆಧ್ಯಾತ್ಮಿಕತೆಯಿಂದ ಮಾತ್ರ ಶಾಂತಿ ನೆಮ್ಮದಿ ಕಾಣಲು ಸಾಧ್ಯ ಎಂದರು.

ದೇವಾಲಯಗಳು, ಮಠ, ಮಂದಿರಗಳು ತನ್ನದೇ ಆದ ಇತಿಹಾಸ, ಹಿನ್ನೆಲೆಗಳನ್ನು ಹೊಂದಿವೆ. ಆ ಮೂಲಕ ಸಂಸ್ಕಾರವನ್ನು ಕಲಿಯಬಹುದಾಗಿದೆ. ಆದ್ದರಿಂದಲೇ ಇಂದು ಆಧುನಿಕತೆ ಬೆಳೆದಂತೆ ಬೃಹತ್ ನಗರಗಳಲ್ಲೂ ದೇವಾಲಯ ಗಳು ನಿರ್ಮಾಣವಾಗುತ್ತಿದೆ. ಇದು ಜನಸಾಮಾನ್ಯರು ಆಧ್ಯಾತ್ಮಿಕತೆಯೆಡೆಗೆ

ಆಸಕ್ತಿ ಹೊಂದುತ್ತಿದ್ದಾರೆ ಎಂಬದನ್ನು ತೋರಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಬಸವಾ ಪಟ್ಟಣದ ತೋಂಟದಾರ್ಯ ಮಠಾಧೀಶರಾದ ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ, ತೊರೆನೂರು ವಿರಕ್ತ ಮಠಾಧೀಶರಾದ ಮಲ್ಲೇಶ ಸ್ವಾಮೀಜಿ, ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ. ಪಾಂಡುರಂಗ, ತಾಲೂಕು ಪಂಚಾಯಿತಿ ಸದಸ್ಯ ಎನ್.ಎಸ್. ಜಯಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಬಿ. ದೇವರಾಜ್, ದೇವಾಲಯ ಸಮಿತಿ ಪದಾಧಿಕಾರಿಗಳಾದ ಟಿ.ಟಿ. ಪ್ರಕಾಶ್, ಟಿ.ಎನ್. ಶಿವಾನಂದ, ಟಿ.ಎನ್. ಸುಂದರೇಶ್, ಟಿ.ಬಿ. ಜಗದೀಶ್, ಕುಶಾಲನಗರ ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಚಂದ್ರಪ್ಪ ಮುಂತಾದವರು ಉಪಸ್ಥಿತರಿದ್ದರು.