ನಾಪೆÇೀಕ್ಲು, ಮಾ. 9: ನಾಪೆÇೀಕ್ಲು ನಗರದಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಸಲಾದ ಸಭೆಯಲ್ಲಿ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್, ಇಂಟ್ರೇಕ್ಸ್ ಕ್ಲಬ್, ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ನಾಪೆÉÇೀಕ್ಲು ಗ್ರಾಮ ಪಂಚಾಯಿತಿ ಮತ್ತು ಶ್ರೀರಾಮ ಟ್ರಸ್ಟ್ , ಮುಳಿಯ ಫೌಂಡೇಷನ್, ನಾಪೆÉÇೀಕ್ಲು ಚೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಈ ಸಂದರ್ಭ ಮಾತನಾಡಿದ ರೋಟರಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ನಾಪೆÇೀಕ್ಲು ನಗರವನ್ನು ಮಾದರಿ ನಗರವನ್ನಾಗಿಸಲು ನಮ್ಮ ಸಂಸ್ಥೆ ಮುಂದೆ ಬಂದಿದ್ದು, ಈ ವಿಷಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಸಾರ್ವಜನಿಕರು ಮುಖ್ಯವಾಗಿ ಸಹಕಾರ ನೀಡಬೇಕೆಂದು ಅವರು ಹೇಳಿದರು.

ಭೂಮಿಯನ್ನು ಕಸದಿಂದ ಕಾಪಾಡುವತ್ತ ವಿವಿಧ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದÀರು. ತಾ. 13 ರಂದು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ನೂತನ ಕಾರ್ಯಕ್ರಮವಾಗಿ ಟ್ಯಾಬ್ಲೋ ಸ್ಪರ್ಧೆಯನ್ನು ಏರ್ಪಾಡಿಸಲಾಗಿದ್ದು, ಇದಕ್ಕೆ ನಗದು ಬಹುಮಾನ ನೀಡುವ ವ್ಯವಸ್ಥೆಯನ್ನು ಮಡಲಾಗಿದ್ದು, ಈ ಗ್ರಾಮ ಪಂಚಾಯಿತಿ ಸದಸ್ಯರು ಪ್ರತಿ ವಿಭಾಗದಿಂದ ಸ್ವರ್ಧೆಗೆ ತಯಾರಾಗಬೇಕೆಂದು ಮನವಿ ಮಾಡಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್ ಮಾತನಾಡಿ, ನಾಪೆÇೀಕ್ಲು ವಿಭಾಗದಲ್ಲಿ ನೀರಿನಿಂದ ಯಾವದೇ ರೋಗ ಬಂದಿಲ್ಲ. ಬದಲಾಗಿ ಜಾಡೀಸ್ ಹರಡಲು ಏನೂ ಕಾರಣ ಎಂದು ಆರೋಗ್ಯ ಇಲಾಖೆ ಯವರು ಸ್ಪಷ್ಟಪಡಿಸಬೇಕೆಂದರು.

ಸಭೆಯಲ್ಲಿ ಚೇಂಬರ್ ಆಫ್ ಕಾರ್ಮರ್ಸ್ ನಾಪೆÇೀಕ್ಲು ಅಧ್ಯಕ್ಷ ಬಿ.ಎಸ್. ತಮ್ಮಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಕೆ. ಮುರುಳಿದರ್, ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಚಾಳಿಯಂಡ ಜಗದೀಶ್, ಟಿ.ಹೆಚ್. ಆಹಮ್ಮದ್, ಮಾಜಿ ಅಧ್ಯಕ್ಷ ಅರುಣ್ ಬೇಬ ಮಾತನಾಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಶೋಭಾ ಮೋಹನ್, ರೋಟರಿ ಮಿಸ್ಟಿ ಹಿಲ್ಸ್ ಕಾರ್ಯದರ್ಶಿ ಡಾ. ನವೀನ್, ಗ್ರಾಮ ಪಂಚಾಯಿತಿ ಸದಸ್ಯರು ಇನ್ನಿತರ ಗಣ್ಯರು ಇದ್ದರು.