ಮಡಿಕೇರಿ, ಮಾ.9: ಇಲ್ಲಿನ ಭಾರತೀಯ ವಿದ್ಯಾಭವನ ಯೋಗ ಕೇಂದ್ರ ಹಾಗೂ ಬಾಲಭವನದ ಪತಂಜಲಿ ಯೋಗ ಕೇಂದ್ರದ ವತಿಯಿಂದ ಪ್ರತಿ ತಿಂಗಳ ಎರಡನೇ ಶುಕ್ರವಾರದಂದು ಹಮ್ಮಿಕೊಳ್ಳಲಾಗುವ 108 ಸೂರ್ಯನಮಸ್ಕಾರ ಯೋಗ ಕ್ರಿಯೆ ತಾ.11ರಂದು ಮಡಿಕೇರಿಯ ಕೋಟೆ ಆವರಣದಲ್ಲಿ ಏರ್ಪಡಿಸಲಾಗಿದೆ. ಬೆಳಿಗ್ಗೆ 5.30ರಿಂದ ಆರಂಭವಾಗಲಿದ್ದು, ಆಸಕ್ತರು ಭಾಗವಹಿಸಬಹುದಾಗಿ ಕೋರಲಾಗಿದೆ.