ಮಡಿಕೇರಿ, ಮಾ. 9:ಕರ್ನಾಟಕ ರಾಜ್ಯದಲ್ಲಿ ಎಲ್ಲಾ ರೀತಿಯ ಲಾಟರಿ ಮಾರಾಟವನ್ನು ನಿಷೇಧಿಸಲಾಗಿದ್ದು, ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಲಾಟರಿಗಳನ್ನು ಬೇರೆ ರಾಜ್ಯಗಳಿಂದ ತಂದು ಮಾರಾಟ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಅನಧಿಕೃತ ಲಾಟರಿ ಮಾರಾಟ ಮತ್ತು ಖರೀದಿ ಮಾಡುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಸಾರ್ವಜನಿಕರ ಗಮನಕ್ಕೆ ತರಲಾಗಿದೆ.

ಅಕ್ರಮ ಲಾಟರಿ ಮಾರಾಟ ಮತ್ತು ಖರೀದಿ ಮಾಡುವವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದ್ದು, ಯಾವುದೇ ಅಕ್ರಮಗಳಿಗೆ ಸಾರ್ವಜನಿಕರು ಉತ್ತೇಜನ ನೀಡಬಾರದು ಹಾಗೂ ಅಕ್ರಮ ಲಾಟರಿ ಮಾರಾಟ ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ತಿಳಿಸಿದ್ದಾರೆ.