ಮಡಿಕೇರಿ, ಮಾ. 9: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘ ರಚಿಸಲು ತೀರ್ಮಾನಿಸಲಾಗಿದ್ದು, ಸಂಘ ರಚನೆಯ ಕುರಿತ ಪೂರ್ವಭಾವಿ ಸಭೆ ತಾ. 11 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಸಭೆಯಲ್ಲಿ ಸಂಘ ರಚನೆಯ ರೂಪುರೇಷಗಳ ಕುರಿತು ಚರ್ಚಿಸಲಿದ್ದು, ಪದವಿ ಕಾಲೇಜಿನ ಹಳೇ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಸಲಹೆ-ಸೂಚನೆಗಳನ್ನು ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 720487333/ 7795633202 ನ್ನು ಸಂಪರ್ಕಿಸುವಂತೆ ಕೋರಲಾಗಿದೆ.