ಕುಶಾಲನಗರ, ಮಾ. 10 : ಮಹಿಳೆಯರನ್ನು ಪೂಜಿಸಿ ಆರಾಧಿಸುವ ಸಂಸ್ಕøತಿ ಹೊಂದಿರುವ ರಾಷ್ಟ್ರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಅಧಿಕಗೊಳ್ಳುತ್ತಿರುವದು ವಿಷಾದನೀಯ ಎಂದು ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪಿ.ಆರ್.ವಿಜಯ್ ಹೇಳಿದರು.

ಸ್ಥಳೀಯ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿಯೊಬ್ಬರು ಸಂವಿಧಾನದ ಜ್ಞಾನ ಹೊಂದುವದು ಅತ್ಯವಶ್ಯಕವಾಗಿದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿಯೂ ತಮ್ಮ ಸಾಧನೆಯ ಹೆಜ್ಜೆ ಗುರುತು ಮೂಡಿಸುತ್ತಿರುವದು ಸಂತಸದ ವಿಷಯ. ಮಹಿಳೆಯರಿಗೆ ಪೂರಕವಾದ ವಿಚಾರಗಳು, ಚಿಂತನೆಗಳು ಕೇವಲ ದಿನವೊಂದಕ್ಕೆ ಮಾತ್ರ ಸೀಮಿತವಾಗದೆ ಪ್ರತಿದಿನ ಆಚರಣೆಯಲ್ಲಿರಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾಲೇಜು ಪ್ರಾಂಶುಪಾಲರಾದ ಹೆಚ್.ವಿ. ಶಿವಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ಉಪನ್ಯಾಸಕರಾದ ಸುನಿತಾ, ಪಳನಿ, ಎನ್ನೆಸ್ಸೆಸ್ ಕಾರ್ಯಕ್ರಮ ಅಧಿಕಾರಿ ಪ್ರಕಾಶ್ ಕುಂಬಾರ್ ಇದ್ದರು.

ವಿದ್ಯಾರ್ಥಿಗಳಾದ ಜಯಶ್ರೀ ಪ್ರಾರ್ಥಿಸಿದರು, ಕಾವ್ಯ ಸ್ವಾಗತಿಸಿದರು, ಉಪನ್ಯಾಸಕಿ ಹೆಚ್.ಎಸ್. ಸ್ಮಿತಾ ಕಾರ್ಯಕ್ರಮ ನಿರೂಪಿಸಿದರು.