ಮೂರ್ನಾಡು, ಮಾ. 10: ಅನಾರೋಗ್ಯದಿಂದ ಬಳಲುತ್ತಿದ್ದ ಅಪರಿಚಿತ ಮಹಿಳೆರ್ಯೋವಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯನ್ನು ಶುಕ್ರವಾರ ಬೆಳಿಗ್ಗೆ ಆಟೋ ಚಾಲಕರೊಬ್ಬರು ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ದಾಖಲಿಸಿದ್ದಾರೆ. ಮಹಿಳೆ ತೀವ್ರ ಅಸ್ವಸ್ಥಗೊಂಡಿದ್ದು ಚಿಕಿತ್ಸೆಗೆ ಒಳಪಡಿಸುತ್ತಿರುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ. ಅಪರಿಚಿತ ಮಹಿಳೆಯು ತಲೆ ಬೋಳಿಸಿಕೊಂಡಿದ್ದು ಚೂಡಿದಾರ್, ಬೂದು ಬಣ್ಣದ ಸ್ವೆಟರ್, ಮೂಗುತಿ ಹಾಗೂ ಓಲೆ ಧರಿಸಿಕೊಂಡಿದ್ದಾರೆ. 40 ವರ್ಷ ಪ್ರಾಯವಿರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ. ವಾರಸುದಾರರು ಇದ್ದಲ್ಲಿ ಮೂರ್ನಾಡು ಪೊಲೀಸ್ ಉಪಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.