ಸುಂಟಿಕೊಪ್ಪ, ಮಾ. 10: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು ಅಧಿಕಾರವನ್ನು ಜವಾಬ್ದಾರಿ ಎಂದು ಸ್ವೀಕರಿಸಿ ಕರ್ತವ್ಯವನ್ನು ನಿರ್ವಹಿಸಿದರೆ ಗ್ರಾಮ ಸ್ವರಾಜ್ಯದ ಕನಸು ನನಸಾಗಲಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ನಿರ್ದೇಶಕ ಡಿ. ಪ್ರಾಣೇಶ್‍ರಾವ್ ಹೇಳಿದರು.

7ನೇ ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಗ್ರಾಮ ಸ್ವರಾಜ್ ಅಭಿಯಾನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದÀರು. ಗ್ರಾ.ಪಂ. ಅಧ್ಯಕ್ಷರು ಸದಸ್ಯರುಗಳಿಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ಏನು ಕಾಮಗಾರಿ ನಡೆಸಬೇಕು. ಪಂಚಾಯಿತಿ ಕಾಯ್ದೆ ಕಾನೂನಿನ ಅರಿವು ಇದ್ದರೆ ಮಾತ್ರ ಅಭಿವೃದ್ಧಿ ಕೆಲಸಗಳನ್ನು ಸುಸೂತ್ರವಾಗಿ ನೇರವೇರಿಸಲು ಸಾಧ್ಯವಾಗಲಿದೆ ಎಂದರು.

ಒಂದು ಗ್ರಾ.ಪಂ.ಗೆ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಇಲಾಖೆಗಳಿಂದ ರೂ. 1.5 ಕೋಟಿ ಅನುದಾನ ಲಭ್ಯವಾಗುತ್ತಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಪಂಚಾಯಿತಿ ಆಡಳಿತ ಮುಂದಾಗ ದಿರುವದರಿಂದ ಹಳ್ಳಿಯ ಅಭಿವೃದ್ಧಿ ಹಿನ್ನಡೆ ಆಗುತ್ತಿದೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಎಂ. ಮುಸ್ತಾಫ (ಕುಂಞಕುಟ್ಟಿ) ವಹಿಸಿದ್ದರು.

ಗ್ರಾ.ಪಂ. ಸದಸ್ಯರುಗಳಾದ ಅಬ್ದುಲ್ಲಾ, ಜೋಸೆಫ್, ಸುಮಲತಾ, ಲಲಿತಾ, ಪುಷ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಿರೀಶ್, ಗ್ರಾಮಾಭಿವೃದ್ಧಿ ಅಧಿಕಾರಿ ಟಿ.ಎಂ. ಅಬೂಬಕ್ಕರ್, ಡಿಟಿಸಿ ಅಧಿಕಾರಿ ಗಳಾದ ಉಮೇಶ್, ರವಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.