ಸೋಮವಾರಪೇಟೆ, ಮಾ. 11: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದಲ್ಲಿ ಭಾಗವಹಿಸುವದರಿಂದ ವಿದ್ಯಾರ್ಥಿಗಳಲ್ಲಿ ಸಹಬಾಳ್ವೆ ಹಾಗೂ ಸಾಮರಸ್ಯ ಸಾಧ್ಯ ಎಂದು ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಹರ್ಷ ಅಭಿಪ್ರಾಯಿಸಿದರು.

ಸ್ಥಳೀಯ ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಶಿಬಿರದಲ್ಲಿ ಭಾಗವಹಿಸುವದರಿಂದ ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯುತ ಕಾರ್ಯ ಮಾಡುವ ಬಯಕೆ ಬರುತ್ತದೆ. ಸ್ವಾರ್ಥ ಮನೋಭಾವನೆ ದೂರವಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಕೆ.ಇ. ಐಪು ವಹಿಸಿ ಮಾತನಾಡಿ, ಶಿಬಿರ ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ಮಾನಸಿಕ ಸ್ಥೈರ್ಯವನ್ನು ತುಂಬುತ್ತದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಹರಗ ಉದಯ, ಶಿಬಿರಾಧಿಕಾರಿ ಶ್ರೀಧರ್, ಸಹ ಶಿಬಿರಾಧಿಕಾರಿ ಹೆಚ್.ಎಸ್. ಶರಣ್, ಹೆಚ್.ಎನ್. ರಮೇಶ್ ಉಪಸ್ಥಿತರಿದ್ದರು.