ಚೆಟ್ಟಳ್ಳಿ, ಮಾ. 12: ಹೋಳಿ ಹುಣ್ಣಿಮೆ ಪ್ರಯುಕ್ತ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯ ಹಾಗೂ ತಲಕಾವೇರಿಯಲ್ಲಿ ವಿಶೇಷ ಪೂಜೆಗಳು ಜರುಗಿತು.ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಯ ಜನತೆ ಪಿಂಡ ಪ್ರದಾನ ಮಾಡುತ್ತಿದ್ದುದು ಕಂಡುಬಂತು. ದೇವಾಲಯಗಳಲ್ಲಿ ಅಪಾರ ಪ್ರಮಾಣದಲ್ಲಿ ಭಕ್ತಾದಿಗಳು ನೆರೆದಿದ್ದರು.