ಮಡಿಕೇರಿ, ಮಾ. 12: ಚೆಟ್ಟಳ್ಳಿ ಪ್ರೌಢಶಾಲೆಯ 2016-17ನೇ ಸಾಲಿನ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭವು ನಡೆಯಿತು.

ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ. ಜಗನ್ನಾಥ್ ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಎದುರಿಸುವಾಗ ಪಠ್ಯಗಳನ್ನು ಕಲಿಯುವ ಸಂದರ್ಭದಲ್ಲಿ ವಿಷಯಗಳ ಮೂಲ ಪರಿಕಲ್ಪನೆಯನ್ನು ಅರ್ಥೈಸಿಕೊಳ್ಳಬೇಕು. ಆ ಮೂಲಕ ಕಲಿಕೆಯ ವಿಷಯಗಳನ್ನು ನಿತ್ಯಜೀವನದಲ್ಲಿ ಅನ್ವಯಿಸಿಕೊಳ್ಳುತ್ತಾ, ಅನುಭವಿಸುತ್ತಾ ಕಲಿತಾಗ ಕಲಿಕೆ ಸುಲಭವೂ, ಪರಿಪೂರ್ಣವೂ ಆಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕೆ. ತಿಲಕ ಅವರು ವಹಿಸಿದ್ದರು. ವಿದ್ಯಾರ್ಥಿ ಸಂಘದ ಮೂಲಕ ವಿದ್ಯಾರ್ಥಿಗಳು ಇನ್ನಷ್ಟು ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ತಿಳಿಸಿದರು.ವಿದ್ಯಾರ್ಥಿನಿಯರು ಪ್ರಾರ್ಥಿಸಿ, ದೈಹಿಕ ಶಿಕ್ಷಕ ಪಿ.ಎಸ್. ಮಾಚಯ್ಯ ಸ್ವಾಗತಿಸಿದರು. ಶಾಲಾ ವಿದ್ಯಾರ್ಥಿನಿ, ಕಾರ್ಯದರ್ಶಿ ಹೆಚ್.ಎಸ್. ದಿವ್ಯ ವರದಿ ವಾಚಿಸಿದರು. ಶಾಲಾ ನಾಯಕ ದಿವಿನ್ ವಂದಿಸಿದರು.