ಮಡಿಕೇರಿ, ಮಾ. 14: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯೊಂದನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಂಪಾಜೆ ಗೇಟ್ನಲ್ಲಿ ಮಂಗಳೂರಿನಿಂದ ಮಡಿಕೇರಿಯತ್ತ ಬರುತ್ತಿದ್ದ ಈಚರ್ ಲಾರಿ (ಕೆಎ 19-ಎಎ-4295)ಯನ್ನು ತಪಾಸಣೆಗೊಳಪಡಿಸಲಾಯಿತು. ಈ ಸಂದರ್ಭ ಚಾಲಕ ಪರಾರಿಯಾಗಿದ್ದು, ಲಾರಿಯನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.