ಕೂಡಿಗೆ, ಮಾ. 15: ಕುಶಾಲನಗರ ಹೋಬಳಿ ಬಿಜೆಪಿ ಘಟಕದ ವತಿಯಿಂದ ರೈತರ ಸಾಲ ಮನ್ನಾ ಮಾಡಲು ಆಗ್ರಹಿಸಿ ಕೂಡಿಗೆ ಡೈರಿ ಸರ್ಕಲ್‍ನಲ್ಲಿ ಪ್ರತಿಭಟನೆ ನಡೆಯಿತು.
ರಾಜ್ಯ ಸರ್ಕಾರ ಸಾಲ ಮನ್ನಾ ಮಾಡುವ ವಿಚಾರವನ್ನು ಕೈಗೆತ್ತಿಕೊಳ್ಳದೆ ಮನಬಂದಂತೆ ಹೇಳಿಕೆ ನೀಡುತ್ತಾ ಜಿಲ್ಲೆಗೆ ಸಮರ್ಪಕವಾಗಿ ಹಣ ಬಿಡುಗಡೆ ಮಾಡದೆ ಕಾಲಹರಣ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎನ್. ರಾಜಾರಾವ್ ಮಾತನಾಡಿ, ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿ ದರೂ ರಾಜ್ಯ ಸರ್ಕಾರ ಅವುಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ದೂರಿದರು.
ಬಿಜೆಪಿ ಹಿರಿಯ ನಾಯಕರಾದ ಜಿ.ಎಲ್. ನಾಗರಾಜ್, ನಾರಾಯಣ, ಪುಂಡರೀಕಾಕ್ಷ, ಕೆ.ಜಿ. ಮನು ಮೊದಲಾದವರು ಮಾತನಾಡಿದರು. ಪ್ರತಿಭಟನೆಯಲ್ಲಿ ಸೋಮವಾರಪೇಟೆ ತಾಲೂಕು ಬಿಜೆಪಿ ಅಧ್ಯಕ್ಷ ಎಂ.ಎನ್. ಕುಮಾರಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳ, ತಾಲೂಕು ಪಂಚಾಯಿತಿ ಸದಸ್ಯ ಗಣೇಶ, ಪ್ರಮುಖರಾದ ಜಿ.ಎಲ್. ನಾಗರಾಜ್, ಎಂ.ಯು. ನಾರಾಯಣ, ಪುಂಡರೀಕಾಕ್ಷ, ವರದ, ಕೂಡುಮಂಗಳೂರು ಸ್ಥಾನೀಯ ಸಮಿತಿ ಅಧ್ಯಕ್ಷ ಮಂಜು, ನಗರಾಧ್ಯಕ್ಷ ಕೆ.ಜಿ. ಮನು, ಪ್ರಧಾನ ಕಾರ್ಯದರ್ಶಿ ಹೆಚ್.ಡಿ. ಶಿವಾಜಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಿಡ್ಯಮಲೆ ದಿನೇಶ, ಬಾಸ್ಕರ್ ನಾಯಕ್, ಮಹೇಂದ್ರ, ಕೂಡಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯೆ ಸಾವಿತ್ರಿ, ಕೂಡುಮಂಗಳೂರು ಸಹಕಾರ ಬ್ಯಾಂಕಿನ ನಿರ್ದೇಶಕ ಕೆ.ಕೆ. ಭೋಗಪ್ಪ, ಸೇರಿದಂತೆ ಬಿಜೆಪಿ ತಾಲೂಕು ಘಟಕದ ಸದಸ್ಯರುಗಳು, ಹೋಬಳಿ ಘಟಕದ ಸದಸ್ಯರು, ಮಹಿಳಾ ಘಟಕದ ಸದಸ್ಯರುಗಳು, ಕಾರ್ಯಕರ್ತರು ಮತ್ತು ವಿವಿಧ ಸಹಕಾರ ಸಂಘಗಳ ನಿರ್ದೇಶಕರು, ಹೆಬ್ಬಾಲೆ, ತೊರೆನೂರು, ಮುಳ್ಳುಸೋಗೆ ಗ್ರಾಮಗಳ ಬಿಜೆಪಿ ಪಕ್ಷದ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.