ಮಡಿಕೇರಿ, ಮಾ. 15: ಬರಹಗಾರ ಮತ್ತು ಪ್ರಗತಿಪರ ಚಿಂತಕ ಯೋಗೇಶ್ ಮಾಸ್ಟರ್ ಮೇಲಿನ ಧಾಳಿಯನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಖಂಡಿಸಿದೆ.

ಪತ್ರಿಕಾ ಹೇಳಿಕೆ ನೀಡಿರುವ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಟಿ. ಬಷೀರ್, ವೈಚಾರಿಕ ಭಿನ್ನಾಭಿಪ್ರಾಯಗಳನ್ನು ಸಂವಾದದ ರೂಪದಲ್ಲಿ ಬಗೆಹರಿಸಿಕೊಳ್ಳಬೇಕೇ ಹೊರತು ಹಲ್ಲೆ ಮಾಡುವ ಮೂಲಕ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.