ಮಡಿಕೇರಿ, ಮಾ. 16: ಅರೆಕಾಲಿಕ ಕಾನೂನು ಸ್ವಯಂಸೇವಕರು ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಿ, ಸಮಾಜದ ಶ್ರೇಯೋಭಿವೃದ್ಧಿಗೆ ಕೈಜೋಡಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಆರ್.ಕೆ.ಜಿ. ಎಂ.ಎಂ. ಮಹಾಸ್ವಾಮೀಜಿ ಕರೆ ನೀಡಿದ್ದಾರೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ನಡೆದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅರೆಕಾಲಿಕ ಕಾನೂನು ಸ್ವಯಂಸೇವಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ನ್ಯಾಯಾಧೀಶರು, ಕಾನೂನಿನ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿ ಮತ್ತಷ್ಟು ಅರಿವು ಮೂಡಿಸಿ ನ್ಯಾಯ ಒದಗಿಸಲು ಪ್ರಯತ್ನಿಸುವಂತೆ ಮಹಾಸ್ವಾಮೀಜಿ ಸಲಹೆ ಮಾಡಿದರು.

ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್ ಮಾತನಾಡಿ, ಅರೆಕಾಲಿಕ ಕಾನೂನು ಸ್ವಯಂಸೇವಕರು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ. ಪವನೇಶ್, ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಸಿ. ಶ್ರೀಕಾಂತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಬಿ.ಟಿ. ಅನ್ನಪೂರ್ಣೇಶ್ವರಿ, ಸರ್ಕಾರಿ ಅಭಿಯೋಜಕ ಫಿರೋಜ್ ಖಾನ್, ಸರ್ಕಾರಿ ವಕೀಲ ಶ್ರೀಧರ್ ನಾಯರ್ ಮತ್ತಿತರರು ಇದ್ದರು.

ಜ್ಯೋತಿ ಪ್ರಾರ್ಥಿಸಿದರು. ವಕೀಲರ ಸಂಘದ ಉಪಾಧ್ಯಕ್ಷ ಕೆ.ಡಿ. ದಯಾನಂದ ಸ್ವಾಗತಿಸಿ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ ನಿರೂಪಿಸಿ, ವಂದಿಸಿದರು.