ಕುಶಾಲನಗರ, ಮಾ. 16: ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಶಾಲನಗರದಲ್ಲಿ ನಡೆದಿದೆ. ಸಮೀಪದ ದೊಡ್ಡತ್ತೂರು ನಿವಾಸಿ ಪ್ರದೀಪ್ ಅಲಿಯಾಸ್ ಹರೀಶ್ ಎಂಬವರು ಗುರುವಾರ ಬೆಳಗ್ಗೆ ಜನತಾ ಕಾಲನಿ ಬಳಿ ತಮ್ಮ ಕಾರಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಸಂದರ್ಭ ಇದನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಪ್ರದೀಪ್ ಅವರನ್ನು ಕೂಡಲೆ ಕುಶಾಲನಗರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪ್ರದೀಪ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಲಾಗಿದೆ. ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದುಬಂದಿಲ್ಲ.