ಮಡಿಕೇರಿ, ಮಾ.16: ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರು ತಾ. 18ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ತಾ. 18ರಂದು ಕೊಡ್ಲಿಪೇಟೆಗೆ ಆಗಮಿಸಿ ಬೆಳಗ್ಗೆ 10.30 ಗಂಟೆಗೆ ಕೊಡ್ಲಿಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ನಂತರ 11.30 ಗಂಟೆಗೆ ಶಾಂತಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನೆ, ಮಧ್ಯಾಹ್ನ 12.30 ಗಂಟೆಗೆ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಹಾಗೂ ಮಧ್ಯಾಹ್ನ 1.30 ಗಂಟೆಗೆ ನಂಜರಾಯಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನೆ ನೆರವೇರಿಸಲಿದ್ದಾರೆ. ನಂತರ ಮಧ್ಯಾಹ್ನ 3.30 ಗಂಟೆಗೆ ಮಡಿಕೇರಿಯ ಸ್ಟೀವರ್ಟ್ ಹಿಲ್‍ನಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಆ್ಯಂಟನಿ ಮೆಂಡೋನ್ಸಾ ತಿಳಿಸಿದ್ದಾರೆ.