ಗೋಣಿಕೊಪ್ಪಲು, ಮಾ. 16: ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನಲ್ಲಿ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊ. ಎಂ.ಡಿ. ಅಕ್ಕಮ್ಮ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೋಡಿರ ಖುಷಿ ಭರತ್, ಬರಹಗಾರ್ತಿ ಕರೋಟಿರ ಶಶಿ ಸುಬ್ರಮಣಿ ಅವರು ಭಾಗವಹಿಸಿ ಮಹಿಳಾ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು.
ಸಮಾರಂಭದಲ್ಲಿ ಕಾವೇರಿ ಕಾಲೇಜಿನ ಎಲ್ಲಾ ಮಹಿಳಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.