ಮಡಿಕೇರಿ, ಮಾ. 17: ತಂಜಾವೂರಿನ ದಕ್ಷಿಣ ವಲಯ ಸಾಂಸ್ಕøತಿಕ ಕೇಂದ್ರ; ಆಕಾಶವಾಣಿ ಮಡಿಕೇರಿ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿರುವ ಮೂರು ದಿನಗಳ ಕಾಡಿನ ಮಕ್ಕಳ ರೇಡಿಯೋ ಹಬ್ಬಕ್ಕೆ ಚಾಲನೆ ದೊರೆಯಿತು.ನಗರದ ಗಾಂಧಿ ಮೈದಾನದಲ್ಲಿ ನಡೆಯುತ್ತಿರುವ ಮೂರು ದಿನಗಳ ಈ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಅತಿಥಿಗಳೊಂದಿಗೆ ಚಾಲನೆ ನೀಡಿದರು. 5ನೇ ವರ್ಷದ ಈ ಕಾರ್ಯಕ್ರಮ ತಾ. 19ರ ತನಕ ನಡೆಯಲಿದ್ದು, ಕೊಡಗು ಸೇರಿದಂತೆ; ದೇಶದ ಬೇರೆ ಬೇರೆ ಭಾಗಗಳಿಂದ ಆದಿವಾಸಿ ಜನಾಂಗದ ಕಲಾ ತಂಡಗಳು ಪಾಲ್ಗೊಳ್ಳುತ್ತಿರುವದು ವಿಶೇಷ. ಇಂದು ಜಿಲ್ಲಾಧಿಕಾರಿಗಳೊಂದಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ತಂಜಾವೂರಿನ ಪ್ರಮುಖ ಸಚಿನ್, ಆಕಾಶವಾಣಿ ನಿಲಯದ ರಾಘವೇಂದ್ರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.