ಮಡಿಕೇರಿ, ಮಾ. 18 : ಕೇರಳ ಜಂಇಯ್ಯತ್ತುಲ್ ಉಲಮಾ ಹಾಗೂ ಎಸ್‍ಕೆಎಸ್‍ಎಸ್‍ಎಫ್ ಸಂಘಟನೆಯ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಮಾ.19 ರಂದು ವೀರಾಜಪೇಟೆಯಲ್ಲಿ ಮದೀನ ಪಾಷನ್ ಜಿಲ್ಲಾ ಸಮ್ಮೇಳನ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‍ಕೆಎಸ್‍ಎಸ್‍ಎಫ್‍ನ ಜಂಟಿ ಕಾರ್ಯದರ್ಶಿ ಸುಹೈಬ್ ಪೈಝಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ವೀರಾಜಪೇಟೆಯ ಹುದೈಬಿಯ್ಯ ನಗರಿಯಲ್ಲಿ ಬೆಳಗ್ಗೆ 9 ಗಂಟೆಗೆ ಪಿ.ಕೆ. ಮೊಹಮ್ಮದ್ ಹಾಜಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಸ್‍ಕೆಎಸ್‍ಎಸ್‍ಎಫ್‍ನ ಕೇಂದ್ರ ಕಾರ್ಯದರ್ಶಿ ಸತ್ತಾರ್ ಪಮದಲ್ಲೂರು ಪ್ರಧಾನ ಭಾಷಣ ಮಾಡಲಿದ್ದಾರೆ. ಮಧ್ಯಾಹ್ನ ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಆಸಿಫ್ ದಾರಿಮಿ ಪುಳಿಕಲ್ ಸಭೆÉಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎಸ್‍ಕೆಎಸ್‍ಎಸ್‍ಎಫ್ ಕೇಂದ್ರ ಸಮಿತಿ ಅಧ್ಯಕ್ಷರಾದ ಪಾಣಕ್ಕಾಡ್ ಹಮೀದ್ ಸಯ್ಯಿದ್ ಹಮೀದಲಿ ಶಿಹಾಬ್ ತಂಞಳ್ ಅವರು ವಹಿಸಲಿದ್ದಾರೆ. ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್‍ನ ಪ್ರಧಾನ ಕಾರ್ಯದರ್ಶಿ ಶೈಖುನಾ ಎಂ.ಟಿ. ಅಬ್ದುಲ್ಲಾ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್. ಸೀತಾರಾಮ್, ಆಹಾರ ಖಾತೆಯ ಸಚಿವರಾದ ಯು.ಟಿ. ಖಾದರ್, ಮಾಜಿ ಸಚಿವರಾದ ದಿನೇಶ್ ಗುಂಡೂರಾವ್, ಮತ್ತಿತರರು ಪಾಲ್ಗೊಳ್ಳುವರು.

ಎಸ್‍ಕೆಐಎಂಬಿಬಿಯ ಕಾರ್ಯದರ್ಶಿಯಾದ ಪಿ.ಎಂ. ಖಾಸಿಂ ಹಾಗೂ ಎಸ್‍ವೈಎಸ್‍ನ ಕೇಂದ್ರ ಕಾರ್ಯದರ್ಶಿ ಅಬ್ದುಸ್ಸಮದ್ ಪೂಕೋಟೂರು ಮತ್ತಿತರರು ಪ್ರಮುಖ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ| ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪಿ.ರಾಜೇಂದ್ರ ಪ್ರಸಾದ್, ಕೊಡಗು ಜಿಲ್ಲಾ ಉಪ ಖಾಝಿ ಎಂ. ಅಬ್ದುಲ್ ಫೈಝಿ, ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ. ರಾಜೇಂದ್ರ ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಸುಹೈಬ್ ಫೈಝಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ಅಬ್ದುಲ್ ರಷೀದ್ ದಾರಿಮಿ, ವೀರಾಜಪೇಟೆ ಉಪಾಧ್ಯಕ್ಷರಾದ ರಫೀಕ್, ಸದಸ್ಯರಾದ ಕಮರುದ್ದೀನ್, ಅಜೀಜ್ ಹಾಗೂ ತಸ್ಲೀಂ ಉಪಸ್ಥಿತರಿದ್ದರು.