ಮಡಿಕೇರಿ, ಮಾ. 18: ಮಡಿಕೇರಿ ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೊರದಂತೆ ಎಚ್ಚರ ವಹಿಸಬೇಕು. ನೀರಿನ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ತೋರದೆ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕೆಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿಂದು ಆಯೋಜಿಸಲಾಗಿದ್ದ ಮಡಿಕೇರಿ ತಾಲೂಕು ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಕೆ.ಜಿ.ಬಿ. ಸೂಚನೆ ನೀಡಿದರು. ತಾಲೂಕಿನ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿರುವ ಬಗ್ಗೆ ಆಯಾ ಗ್ರಾಮಗಳ ಪಂಚಾಯಿತಿ ಅಧ್ಯಕ್ಷರುಗಳು, ಸದಸ್ಯರುಗಳು ಸಭೆಯ ಗಮನ ಸೆಳೆದ ಹಿನ್ನೆಲೆ ಶಾಸಕರು ಸಂಬಂಧಿಸಿದ ಅಧಿಕಾರಿಗಳಿಗೆ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುವಂತೆ ಸೂಚಿಸಿದರು.
ಜಾಂಡೀಸ್ ಜಂಜಾಟ
ಸಭೆಯಲ್ಲಿ ಮಾತನಾಡಿದ ಜಿ.ಪಂ. ಸದಸ್ಯ ಮುರಳಿ ನಾಪೋಕ್ಲು ವ್ಯಾಪ್ತಿಯಲ್ಲಿ ಹರಡಿರುವ ಜಾಂಡೀಸ್ ಕಾಯಿಲೆ ಸಂಬಂಧ ಆರೋಗ್ಯ ಇಲಾಖೆ ಕೈಗೊಂಡಿರುವ ಕ್ರಮಗಳೇನು ಎಂದು ಪ್ರಶ್ನಿಸಿದರು.
ಜಾಂಡೀಸ್ ಕಾಯಿಲೆ ನಿಯಂತ್ರಣಕ್ಕೆ ಬಂದಿದೆ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ.
(ಮೊದಲ ಪುಟದಿಂದ) ಆದರೆ ಆ ವರದಿ ಸತ್ಯಕ್ಕೆ ದೂರವಾಗಿದ್ದು, ಇನ್ನೂ ಕೂಡ ಜಾಂಡೀಸ್ ನಿಯಂತ್ರಣಕ್ಕೆ ಬಂದಿಲ್ಲ. ಹೊಳೆಯಿಂದ ನೇರವಾಗಿ ನೀರನ್ನು ಪಂಪ್ ಮಾಡಲಾಗುತ್ತಿದ್ದು, ಅಶುದ್ಧ ನೀರನ್ನೇ ಸರಬರಾಜು ಮಾಡಲಾಗುತ್ತಿದೆ. ರಸ್ತೆ ಬದಿ ಪಾನಿಪೂರಿ, ಹಣ್ಣುಹಂಪಲು ಮಾರಾಟವನ್ನು ತೆರವುಗೊಳಿಸಲು ಆದೇಶ ಬಂದರೂ, ನಾಪೋಕ್ಲು ಪಂಚಾಯಿತಿ ಪಿಡಿಓ ಅವರು ಕ್ರಮವಹಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಾವುಗಳು ಎಚ್ಚರಗೊಳ್ಳಲು ‘ಎಷ್ಟು ಮಂದಿ ಸಾವನ್ನಪ್ಪಬೇಕು’? ಎಂದು ಖಾರವಾಗಿ ಅಧಿಕಾರಿಗಳನ್ನು ಪ್ರಶ್ನಿಸಿದರು.
ಈ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಿ ತಹಶೀಲ್ದಾರರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ವರದಿ ನೀಡುವಂತೆ ಆರೋಗ್ಯಾಧಿಕಾರಿ ರವಿಕುಮಾರ್ ಅವರಿಗೆ ಶಾಸಕ ಬೋಪಯ್ಯ ಸೂಚನೆ ನೀಡಿದರು.
ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಕೊಡಗಿನಲ್ಲಿ ಕಸ ವಿಲೇವಾರಿ ಸಮಸ್ಯೆ ಬಿಗಡಾಯಿಸುತ್ತಿದ್ದು, ಕಸ ವಿಲೇವಾರಿಗೆ ಜಾಗವಿಲ್ಲದೆ ಪರದಾಡುವ ಸ್ಥಿತಿ ತಲೆದೋರಿದೆ. ಹೀಗಿರುವಾಗ ಭಾಗಮಂಡಲ ಪಂಚಾಯಿತಿಯವರು ಕಸ ವಿಲೇವಾರಿಗೆ ಪೈಸಾರಿ ಜಾಗವೊಂದನ್ನು ಗುರುತಿಸಿದರೆ, ಅದು ಅರಣ್ಯ ಇಲಾಖೆಗೆ ಸೇರಿದ ಜಾಗ ಎಂದು ಅರಣ್ಯ ಇಲಾಖೆಗೆ ಸೇರಿದ ಜಾಗ ಎಂದು ಅರಣ್ಯ ಇಲಾಖೆ ಪಂಚಾಯಿತಿಗೆ ನೋಟೀಸ್ ನೀಡಿದೆ ಇದು ಸರಿನಾ? ಎಂದು ಕೆಜಿಬಿ ಕುಡಿಯುವ ನೀರಿಗೆ ಆದ್ಯತೆ: ಶಾಸಕ ಕೆ.ಜಿ.ಬಿ. ಸೂಚನೆ.